ಕಲ್ಪ ಮೀಡಿಯಾ ಹೌಸ್ | ಬಿಹಾರ |
ಅಕ್ರಮ ಮರಳು ಗಣಿಗಾರಿಕೆ ದಂಧೆಯನ್ನು ಪರಿಶೀಲಿಸಿಲು ತೆರಳಿದ ಮಹಿಳಾ ಅಧಿಕಾರಿಯನ್ನು ಸಮಾಜಘಾತುಕರು ಅಕ್ಷರಶಃ ಪ್ರಾಣಿಯಂತೆ ಎಳೆದಾಡಿ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘೋರ ಘಟನೆ ಬಿಹಾರದಲ್ಲಿ ನಡೆದಿದೆ.
ಪಾಟ್ನಾ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಸಂಬಂಧಿಸಿದಂತೆ ಮಹಿಳಾ ಅಧಿಕಾರಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಸಮಾಜಘಾತುಕರ ಗುಂಪು ದಾಳಿ ನಡೆಸಿದೆ.
ಮಹಿಳಾ ಅಧಿಕಾರಿಯ ಮೇಲೆ ಹಾಡಹಗಲೇ ಜನರ ಗುಂಪು ಎಳೆದೊಯ್ದು ಹಲ್ಲೆ ನಡೆಸಿದೆ. ಘಟನೆಯನ್ನು ದೃಢಪಡಿಸಿದ ವೀಡಿಯೊ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದ್ದು, ಈ ಕ್ರೂರ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಘಟನೆಯಲ್ಲಿ ಜಿಲ್ಲಾ ಗಣಿ ಮಹಿಳಾ ಅಧಿಕಾರಿ ಸೇರಿದಂತೆ ಇಬ್ಬರು ಗಣಿ ನಿರೀಕ್ಷಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಘಟನೆ ಕುರಿತಾಗಿ ಸ್ಥಳೀಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಪಾಟ್ನಾ ಎಸ್’ಪಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 3 ಎಫ್’ಐಆರ್ ದಾಖಲಾಗಿದ್ದು, 44 ಮಂದಿಯನ್ನು ಬಂಧಿಸಲಾಗಿದೆ. ಇನ್ನೂ ಹಲವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದಿದ್ದಾರೆ.
ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಆರ್’ಜೆಡಿ ನಾಯಕ ಶಿವಾನಂದ್ ತಿವಾರಿ, ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಿಎಂ ನಿತೀಶ್ ಕುಮಾರ್ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post