ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ತಂಗಿಯ ಮದುವೆ ಮುಗಿಸಿಕೊಂಡು ವಾಪಸ್ ಬರುವಾಗಿ ಹಿಂಬದಿಯಿಂದ ವಾಹನಕ್ಕೆ ಡಿಯೋ ಬೈಕ್ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ತೀವ್ರಸ್ವರೂಪದ ಗಾಯಗಳಾಗಿದೆ.
ಹಿರಿಯೂರು ನಗರ ಠಾಣೆ ರಾಷ್ಟೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಮೃತನನ್ನು ಚಳ್ಳಕೆರೆ ತಾಲೂಕಿನ ಎಂ. ಮಹದೇವಪುರದ ಮಹೇಶ್(19) ಹಾಗೂ ಗಾಯಾಳು ಮಲ್ಲಿಕಾರ್ಜುನ್ ಎಂದು ಗುರುತಿಸಲಾಗಿದೆ.

ತಂಗಿಯ ಮದುವೆಗೆ ಬೆಂಗಳೂರಿನಿಂದ ಬರುವಾಗ ನಡೆದ ಘಟನೆ ನಡೆದಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















