ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಎಂಆರ್’ಎಸ್ ಬಳಿಯಲ್ಲಿ ವೇಗವಾಗಿ ಬಂದ ಬೈಕ್ ಸ್ಕಿಡ್ ಆಗಿ ಬಿದ್ದು ಅಪಘಾತ ಸಂಭವಿಸಿದ್ದು, ಸವಾರನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ವೇಗವಾಗಿ ಬಂದ ಬೈಕ್ ಎಂಆರ್’ಎಸ್ ಕಚೇರಿ ಎದುರಿನಲ್ಲಿ ಸ್ಕಿಡ್ ಆಗಿ ಬಿದ್ದಿದೆ. ಪರಿಣಾಮವಾಗಿ ಸವಾರನಿಗೆ ಗಂಭೀರ ಗಾಯಗಳಾಗಿ ತೀವ್ರ ರಕ್ತಸ್ರಾವವಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ತತಕ್ಷಣ ಸ್ಥಳೀಯರು ಆತನಿಗೆ ಪ್ರಥಮ ಆರೈಕೆ ಮಾಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಕುರಿತಾಗಿ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post