ನವದೆಹಲಿ: ಸ್ವತಂತ್ರ ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಐತಿಹಾಸಿಕ ನಿರ್ಣಯ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಮೇಲ್ಜಾತಿಯ ಬಡವರಿಗೂ ಸಹ ಶೇ.10ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡನೆ ಮಾಡಲಾಯಿತು.
ಕೇಂದ್ರ ಸಚಿವ ತವಾರ್ ಚಂದ್ ಗೆಹ್ಲೋಟ್ ಅವರು ಲೋಕಸಭೆಯಲ್ಲಿ ಇಂದು ಮಧ್ಯಾಹ್ನ ಮಸೂದೆಯನ್ನು ಮಂಡಿಸಿದ್ದು, ಸಂಸತ್ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು.
ಆದರೆ, ಈ ಮಸೂದೆಗೆ ಸಮಾಜವಾದಿ ಪಾರ್ಟಿ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದೆ. ಇಂದು ಸಂಪೂರ್ಣ ಇದೇ ಮಸೂದೆ ಮೇಲೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಮುಂದುವರೆದ ಜನಾಂಗತದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ನೀಡುವ ಮಹತ್ವದ ನಿರ್ಧಾರಕ್ಕೆ ನಿನ್ನೆ ಸಂಜೆ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿತ್ತು.
Discussion about this post