ಬೆಂಗಳೂರು: ಕಾಲೇಜುಗಳಿಗೆ ಬಂಕ್ ಮಾಡಿ ಸಮಯ ಹಾಗೂ ಪಾಠಗಳನ್ನು ವ್ಯರ್ಥ ಮಾಡುವ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಶಾಕ್ ಕಾದಿದ್ದು, ಇದಕ್ಕಾಗಿ ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.
ರಾಜ್ಯದ ಎಲ್ಲಾ ಪದವಿ ಕಾಲೇಜುಗಳನ್ನು ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸುವ ಮೂಲಕ ಕಾಲೇಜಿಗೆ ಬಂಕ್ ಮಾಡುವುದು ಹಾಗೂ ನಕಲಿ ಹಾಜರಾತಿಯನ್ನು ತಪ್ಪಿಸುವ ಕ್ರಮಕ್ಕೆ ಮುಂದಾಗಿದೆ. ಇದು ವಿದ್ಯಾರ್ಥಿಗಳಿಗೆ ಮಾತ್ರವಲ್ಲದೇ ಉಪನ್ಯಾಸಕರಿಗೂ ಕಡ್ಡಾಯಗೊಳಿಸಲು ಮುಂದಾಗಿದೆ.
ಈ ಕುರಿತಂತೆ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಮಾತನಾಡಿದ್ದು, ವಿವಿ ಅಥವಾ ಕಾಲೇಜಿಕ ಕ್ಯಾಂಪಸ್‌ನಲ್ಲಿ ಪ್ರತಿಯೊಬ್ಬರೂ ಪ್ರತಿದಿನ ಪಂಚ್ ಮಾಡಿಯೇ ಕಾಲೇಜಿನ ಒಳಗೆ ಪ್ರವೇಶ ಮಾಡಬೇಕು. ಬಯೊಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಪರೀಕ್ಷಾ ವ್ಯವಸ್ಥೆಗೂ ಲಿಂಕ್ ಮಾಡಲಾಗುತ್ತಿದ್ದು, ಪ್ರತಿ ದಿನ ವಿದ್ಯಾರ್ಥಿ ತರಗತಿಗೆ ಹಾಜರಾಗುವ ಮುನ್ನ ಅಥವಾ ನಿರ್ಗಮಿಸುವ ಮುನ್ನ ಪಂಚ್ ಮಾಡುವ ಸಂದರ್ಭದಲ್ಲಿ ಅದರ ಡೇಟಾ ಸರ್ವರ್ನಲ್ಲಿ ದಾಖಲಾಗಲಿದೆ ಎಂದರು.
ವಿವಿಯ ಹಿರಿಯ ಅಧಿಕಾರಿಗಳು ಅಥವಾ ತಾಂತ್ರಿಕ ತಂಡಕ್ಕೆ ದತ್ತಾಂಶ ಲಭ್ಯವಾಗುವ ರೀತಿಯಲ್ಲಿ ಬಯೊಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತದೆ. ತಾಂತ್ರಿಕ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದರು.
Discussion about this post