ಭದ್ರಾವತಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಇಲ್ಲಿನ ರೈಲು ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸಿದರು.
ನಿನ್ನೆ ಸಂಜೆ ಬೆಂಗಳೂರು ಶಿವಮೊಗ್ಗ ಇಂಟರ್’ಸಿಟಿ ರೈಲು ಭದ್ರಾವತಿಗೆ ಆಗಮಿಸಿದ ವೇಳೆ ವಾರಾಂತ್ಯದ ರಜೆಗೆ ಬಂದಿರುವ ರೈಲು ಪ್ರಯಾಣಿಕರಲ್ಲಿ ಕಾರ್ಯಕರ್ತರು ಮನವಿ ಮಾಡಿದರು.
ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿಯವರ ಕೇಂದ್ರದ ಅನುದಾನ ಹಾಗೂ ಯೋಜನೆಗಳ ಬಗ್ಗೆ ತಿಳಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಲಾಯಿತು.
Discussion about this post