ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಅಸ್ತು ಎಂದಿದ್ದು, ಜ.13ರಂದು ಏಳು ಜನರು ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, 7 ಜನರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ವರಿಷ್ಠರು ಒಪ್ಪಿಗೆ ಸೂಚಿಸಿದ್ದು, ಇದರಂತೆ ಜ.13ರಂದು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.
ಆದರೆ, ಯಾರೆಲ್ಲಾ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವುದನ್ನು ತಿಳಿಸದ ಅವರ ಸೋಮವಾರ ಹೆಸರುಗಳನ್ನು ಬಹಿರಂಗಗೊಳಿಸಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post