ನವದೆಹಲಿ: ಲೋಕಸಭಾ ಚುನಾವಣಾ ಕಣದಲ್ಲಿ ವಾದ-ಪ್ರತಿವಾದಗಳು ತಾರಕಕ್ಕೇರಿರುವಂತೆಯೇ, ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ಹತ್ಯೆಗೆ ಬಿಜೆಪಿಯೇ ಕಾರಣ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಬಿಜೆಪಿ ಬೆಂಬಲಿತ ವಿ.ಪಿ. ಸಿಂಗ್ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ರಾಜೀವ್ ಗಾಂಧಿ ಅವರ ಹತ್ಯೆಯಾಗುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜೀವ್ ಅವರಿಗೆ ಹೆಚ್ಚಿನ ಭದ್ರತೆ ನೀಡುವಂತೆ ಕೋರಲಾಗಿತ್ತು. ಆದರೆ, ಅಂದಿನ ಸರ್ಕಾರ ಹೆಚ್ಚುವರಿ ಭದ್ರತೆ ನೀಡಲು ನಿರಾಕರಿಸಿದ್ದೇ ಹತ್ಯೆಯಾಗಲು ಕಾರಣ ಎಂದು ಆರೋಪಿಸಿದ್ದಾರೆ.
ಬಿಜೆಪಿಯ ದ್ವೇಷದ ಫಲವಾಗಿಯೇ ರಾಜೀವ್ ಅವರನ್ನು ನಾವು ಕಳೆದುಕೊಳ್ಳಬೇಕಾಯಿತು ಎಂದಿದ್ದಾರೆ.
Discussion about this post