No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Friday, March 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಅಮಿತ್ ಶಾರ ಕುಶಲ ರಣನೀತಿಗಳಿಂದ ಕರ್ನಾಟಕದಲ್ಲಿ ಗೆಲುವನ್ನು ಖಚಿತಪಡಿಸಿಕೊಳ್ಳುತ್ತಿರುವ ಬಿಜೆಪಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 26, 2023
in ರಾಜಕೀಯ
0
ಅಮಿತ್ ಶಾರ ಕುಶಲ ರಣನೀತಿಗಳಿಂದ ಕರ್ನಾಟಕದಲ್ಲಿ ಗೆಲುವನ್ನು ಖಚಿತಪಡಿಸಿಕೊಳ್ಳುತ್ತಿರುವ ಬಿಜೆಪಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಕರ್ನಾಟಕ ಚುನಾವಣೆ #KarnatakaEleection2023 ದಿನಾಂಕ ಹತ್ತಿರವಾಗುತ್ತಿದ್ದಂತೆ ಅಮಿತ್ ಶಾ ಮಾರ್ಗದರ್ಶನದಲ್ಲಿ ಭಾರತೀಯ ಜನತಾ ಪಕ್ಷ ಬಿರುಸಿನ ಪ್ರಚಾರ ಆರಂಭಿಸಿದೆ. ರಾಜ್ಯದ ಎಲ್ಲಾ 224 ಸ್ಥಾನಗಳಿಗೆ ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರಬೀಳಲಿದೆ.

ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಯ ಗೆಲುವನ್ನು ಖಚಿತಪಡಿಸಿಕೊಳ್ಳಲು ಮತ್ತು ಬಿಜೆಪಿ #BJP ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಲು ಪಕ್ಷದ ಮುಖ್ಯ ಕಾರ್ಯತಂತ್ರ ನಿರೂಪಕ ಮತ್ತು ಭಾಜಪದ ಕಠಿಣ ಪರಿಶ್ರಮಿ ನಾಯಕ ಅಮಿತ್ ಶಾ ಕರ್ನಾಟಕದಲ್ಲಿಯೇ ಬೀಡು ಬಿಟ್ಟಿದ್ದಾರೆ. ಚುನಾವಣಾ ಕಾರ್ಯತಂತ್ರಗಳಲ್ಲಿ ಹೆಸರುವಾಸಿಯಾಗಿರುವ ಅಮಿತ್ ಶಾ, #AmithSha ದಿನವಿಡೀ ರೋಡ್ ಶೋಗಳು, ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ. ಪಕ್ಷವನ್ನು ಒಗ್ಗೂಡಿಸಿ ಚುನಾವಣೆಯಲ್ಲಿ ಭಾಜಪದ ಬಾವುಟನ್ನು ಹಾರಿಸಲು ಕಾರ್ಯತಂತ್ರಗಳನ್ನು ರೂಪಿಸಲು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ತಡರಾತ್ರಿಯವರೆಗೆ ಸಭೆಗಳನ್ನು ನಡೆಸುತ್ತಿದ್ದಾರೆ. ಈ ವರ್ಷದಲ್ಲಿ ಈಗಾಗಲೇ ಸುಮಾರು ಹದಿನಾಲ್ಕು ದಿನಗಳಿಗಿಂತಲೂ ಹೆಚ್ಚು ಸಮಯವನ್ನು ಕರ್ನಾಟಕದಲ್ಲಿ ಕಳೆದಿರುವ ಅಮಿತ್ ಶಾ, ಕರುನಾಡಿನಲ್ಲಿ ಮತ್ತೊಮ್ಮೆ ಕಮಲನವನ್ನು ಅರಳಿಸಲೇ ಬೇಕು ಎಂದು ಸಂಕಲ್ಪ ತೊಟ್ಟಿದ್ದಾರೆ.
ಕರ್ನಾಟಕದ, ಚಾಮರಾಜನಗರದ ಗುಂಡ್ಲುಪೇಟೆ ಮತ್ತು ಹಾಸನದ ಸಕಲೇಶಪುರದಲ್ಲಿ ಸೋಮವಾರ ನಡೆದ ಎರಡು ರೋಡ್‌ಶೋಗಳಲ್ಲಿ ಸೇರಿದ್ದ ಭಾರಿ ಜನಸಮೂಹವು, ಮೋದಿಯವರ ನಂತರ, ಅತಿ ಹೆಚ್ಚು ಜನಸಮೂಹವನ್ನು ಸೆಳೆಯುವ ನಾಯಕ ಅಮಿತ್ ಶಾ ಎಂಬುದನ್ನು ಸಾಬೀತುಪಡಿಸಿತು. ಇದಕ್ಕೂ ಮೊದಲ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಶಾ, ದೇವಿಯ ದರ್ಶನ ಪಡೆದರು.

ಹುಬ್ಬಳ್ಳಿಯಲ್ಲಿ #Hubli ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಪ್ರಸ್ತಾಪಿಸಿದ ಅಮಿತ್ ಶಾ, ಕಾಂಗ್ರೆಸ್-ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಮುಂದುವರೆಸುತ್ತಾ ಶಾ, ಮೋದಿಯವರ ನೇತೃತ್ವದಲ್ಲಿ ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುತ್ತಾ, ಅಭಿವೃದ್ಧಿಯ ಪರ್ವ ನೀಡುವ ಡಬಲ್ ಇಂಜಿನ್ ಸರ್ಕಾರ ಬೇಕೋ, ಕರ್ನಾಟಕವನ್ನು ದೆಹಲಿಯ ಎಟಿಎಂ ಮಾಡುವ ಕಾಂಗ್ರೆಸ್‌ನ ರಿವರ್ಸ್ ಗೇರ್ ಸರ್ಕಾರ ಬೇಕೋ ಎಂಬುದನ್ನು ಕರ್ನಾಟಕದ ಜನತೆ ನಿರ್ಧರಿಸಬೇಕು ಎಂದು ಹೇಳಿದರು.

ತಮ್ಮ ಕಾಲಘಟ್ಟದಲ್ಲಿ ಪಿಎಫ್ಐನಂತಹ ತೀವ್ರವಾದಿ ಸಂಘಟನೆಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿ, ಕರ್ನಾಟಕದ ಸುರಕ್ಷತೆಯನ್ನು ಕಡೆಗಣಿಸುವ ಕಾಂಗ್ರೆಸ್ #Congress ಪಕ್ಷ ಒಂದು ಕಡೆಯಿದ್ದರೆ, ಇನ್ನೊಂದು ಕಡೆ ಅಂತಹ ಉಗ್ರವಾದಿ ಸಂಘಟನೆಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಕರ್ನಾಟಕವನ್ನು ಸುರಕ್ಷಿತ ಗೊಳಿಸುವುದು ಮಾತ್ರವಲ್ಲದೇ, ರಾಜಕೀಯ ಸ್ಥಿರತೆ ಮೂಲಕ ನವ ಕರ್ನಾಟಕ ಅಭಿವೃದ್ಧಿಗೆ ಮುನ್ನುಡಿ ಬರೆಯುವ ಭಾರತೀಯ ಜನತಾ ಪಕ್ಷವಿದೆ ಎಂದರು.
ಕಾಂಗ್ರೆಸ್ ತನ್ನ ಆಡಳಿತದಲ್ಲಿ ಸಂವಿಧಾನ ಬಾಹಿರವಾಗಿ ತುಷ್ಟೀಕರಣ ರಾಜಕಾರಣ ಮಾಡುತ್ತಾ ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ನಾಲ್ಕು ಪ್ರತಿಶತ ಮೀಸಲಾತಿಯನ್ನು ನೀಡಿತ್ತು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಕರ್ನಾಟಕದ ಬಿಜೆಪಿ ಸರ್ಕಾರ ಆ ಅಸಂವಿಧಾನಿಕ ಮೀಸಲಾತಿಯನ್ನು ರದ್ದುಗೊಳಿಸಿತು. ಇದರ ಜೊತೆಗೆ ಪರಿಶಿಷ್ಠ ಜಾತಿ ಮತ್ತು ಪಂಗಡಗಳು ಮತ್ತು ಹಿಂದುಳಿದ ವರ್ಗಗಳಾದ ಲಿಂಗಾಯತ ಮತ್ತು ಒಕ್ಕಲಿಗ ಸಮಾಜದ ಮೀಸಲಾತಿಯನ್ನು ಹೆಚ್ಚಿಸಿ, ಹಲವು ವರ್ಷಗಳ ನಂತರ ಸಾಮಾಜಿಕ ನ್ಯಾಯವನ್ನು ನೀಡುವ ಕಾರ್ಯವನ್ನು ಭಾಜಪ ಮಾಡಿದೆ ಎಂದರು.

ಕಾಂಗ್ರೆಸ್‌, ಕರ್ನಾಟಕದ ಜನ ಕಲ್ಯಾಣವನ್ನಾಗಲಿ, ಅಥವಾ ಕರ್ನಾಟಕದ ವಿಕಾಸವನ್ನಾಗಲಿ ಬಯಸುತ್ತಿಲ್ಲ. ಅದು ಕರ್ನಾಟಕದಲ್ಲಿ ತನ್ನ ಎಟಿಎಂ ಅನ್ನು ಹುಡುಕುತ್ತಿದೆ. ಇನ್ನೊಂದು ಕಡೆ ಜೆಡಿಎಸ್ ಒಂದು ಪರಿವಾರವಾದಿ ಪಕ್ಷವಾಗಿದ್ದು, ಅದು ಚುನಾವಣೆಯಲ್ಲಿ ಯಾವಾಗಲೂ ಕಾಂಗ್ರೆಸ್ ಎದುರು ಹೋರಾಡಿದರೂ, ಚುನಾವಣೆ ನಂತರ ಅಧಿಕಾರಕ್ಕಾಗಿ ಕಾಂಗ್ರೆಸ್ ಜೊತೆ ಸೇರುತ್ತದೆ ಎಂದು ಜೆಡಿಎಸ್ ವಿರುದ್ಧ ಕೂಡ ಹರಿಹಾಯ್ದರು.ಕರ್ನಾಟಕದ ಜನತೆಗೆ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ ಶಾ, ಪೂರ್ಣ ಬಹುಮತದ ಭಾರತೀಯ ಜನತಾ ಪಾರ್ಟಿಯ ಸರ್ಕಾರವನ್ನು ಆರಿಸಿ. ಅದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕರ್ನಾಟಕದ ಸರ್ವಾಂಗೀಣ ವಿಕಾಸ ಮಾಡುವುದರ ಜೊತೆಗೆ ಕರ್ನಾಟಕದಿಂದ ಬಡತನವನ್ನು ನೂರು ಪ್ರತಿಶತವಾಗಿ ನಿರ್ಮೂಲನೆ ಮಾಡಲಿದೆ.

ಕರ್ನಾಟಕದ ವಿವಿಧ ಪ್ರದೇಶಗಳನ್ನು ಸುತ್ತಿರುವ ಅಮಿತ್ ಶಾ ಆಯಾ ಭಾಗಗಳ ತಳಮಟ್ಟದ ಸಮಸ್ಯೆಗಳನ್ನು ಅರಿತಿದ್ದಾರೆ, ಹಾಗೇ ತಮ್ಮ ವಿಭಿನ್ನ ರಾಜನೀತಿ, ರಣತಂತ್ರಗಳಿಂದಾಗಿ, ಕಳೆದ 4 ವರ್ಷಗಳಿಂದ ಕರ್ನಾಟಕದಲ್ಲಿ ರಾಜಕೀಯ ಸ್ಥಿರತೆ ಮತ್ತು ಅಭಿವೃದ್ಧಿಯ ನವ ಅಧ್ಯಾಯಕ್ಕೆ ಮುನ್ನುಡಿ ಬರೆಯುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amith ShahAssembly Election 2023BJPcongressHubliKannada News WebsiteLatest News KannadaNorth Karnatakaಅಮಿತ್ ಶಾಉತ್ತರ ಕರ್ನಾಟಕಕರ್ನಾಟಕಕರ್ನಾಟಕ ಚುನಾವಣೆ 2023ಕಾಂಗ್ರೆಸ್ಗುಂಡ್ಲುಪೇಟೆಚಾಮರಾಜನಗರಬಿಜೆಪಿಭಾರತೀಯ ಜನತಾ ಪಕ್ಷಹಾಸನಹುಬ್ಬಳ್ಳಿ
Share205Tweet124Send
Previous Post

ಶಿವಮೊಗ್ಗ ಕ್ಷೇತ್ರದ ನಾಲ್ಕು ಪಕ್ಷದ ಅಭ್ಯರ್ಥಿಗಳೊಡನೆ ಸಂವಾದ

Next Post

ಮಕ್ಕಳಿಗೆ ಮೊಬೈಲ್ ನೀಡುವ ಮುನ್ನ ಈ ಶಾಕಿಂಗ್ ಸುದ್ದಿ ತಪ್ಪದೇ ಓದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಕ್ಕಳಿಗೆ ಮೊಬೈಲ್ ನೀಡುವ ಮುನ್ನ ಈ ಶಾಕಿಂಗ್ ಸುದ್ದಿ ತಪ್ಪದೇ ಓದಿ

ಮಕ್ಕಳಿಗೆ ಮೊಬೈಲ್ ನೀಡುವ ಮುನ್ನ ಈ ಶಾಕಿಂಗ್ ಸುದ್ದಿ ತಪ್ಪದೇ ಓದಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL