ಬೆಂಗಳೂರು: ಪುಲ್ವಾಮಾದಲ್ಲಿ ಉಗ್ರರು ನಡೆಸಿದ ಯೋಧರ ಮೇಲಿನ ಹತ್ಯಾಕಾಂಡವನ್ನು ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ದೂರಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕಣ್ಣಿಟ್ಟಿದ್ದಾರೆ. ಪುಲ್ವಾಮಾ ದಾಳಿಯ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಲು ಮುಂದಾಗಬಾರದು. ಬಿಜೆಪಿಯವರು ಮಾತೆತ್ತಿದ್ದರೆ ನಾವೇ ದೇಶಪ್ರೇಮಿಗಳು ಅಂತ ಹೇಳುತ್ತಾರೆ. ಚಿಂತನೆಗಳು ಯಾವುದೇ ಇರಲಿ. ಮಾತುಕತೆ ಮೂಲಕ ಬಗೆಹರಿಸುವ ನಿರ್ಧಾರ ಕೈಗೊಳ್ಳಬೇಕು ಎಂದರು.
Discussion about this post