ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಗೆ #LoksabhaElection2024 ರಾಜ್ಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಶಿವಮೊಗ್ಗ ಕ್ಷೇತ್ರಕ್ಕೆ ಮತ್ತೊಮ್ಮೆ ಬಿ.ವೈ. ರಾಘವೇಂದ್ರ #BYRaghavendra ಅವರಿಗೆ ಟಿಕೇಟ್ ಘೋಷಣೆ ಮಾಡಿದೆ.
ಈ ಕುರಿತಂತೆ ಬಿಜೆಪಿ ಇಂದು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ #BSYediyurappa ಪುತ್ರ, ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಮತ್ತೊಮ್ಮೆ ಅಖಾಡಕ್ಕೆ ಇಳಿದಿದ್ದಾರೆ.
ಉಡುಪಿಯ #Udupi ಬೈಂದೂರು ವಿಧಾನಸಭಾ ಕ್ಷೇತ್ರದವರೆಗೂ ವ್ಯಾಪಿಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿರುವ ರಾಘವೇಂದ್ರ ಅವರು ಅಭಿವೃದ್ಧಿಯ ಹರಿಹಾರ ಎಂಬ ಖ್ಯಾತಿ ಗಳಿಸಿದ್ದಾರೆ.
ರಾಘವೇಂದ್ರ ಅವರಿಗೆ ಟಿಕೇಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಸೇರಿದಂತೆ ಕ್ಷೇತ್ರದಾದ್ಯಂತ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ.
ರಾಘವೇಂದ್ರ ಅವರಿಗೆ ಟಿಕೇಟ್ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ವಿನೋಬ ನಗರದಲ್ಲಿರುವ ಅವರ ನಿವಾಸದ ಬಳಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.
ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಪ್ರಮುಖರಾದ ಎಸ್. ದತ್ತಾತ್ರಿ, ಡಾ.ಧನಂಜಯ ಸರ್ಜಿ, ಎಚ್.ಸಿ. ಮಾಲತೇಶ್, ಮಂಗೋಟೆ ರುದ್ರೇಶ್ ಸೇರಿದಂತೆ ಹಲವರು ರಾಘವೇಂದ್ರ ಅವರಿಗೆ ಸಿಹಿ ತಿನ್ನಿಸಿ ಶುಭ ಕೋರಿದರು.
ಮೂಲಭೂತ ಸೌಲಭ್ಯ, ರಸ್ತೆ, ರೈಲ್ವೆ, ವಾಯುಯಾನ ಸಂಪರ್ಕ, ಫ್ಲೈಓವರ್, ಸೇತುವೆಗಳು, ಮೊಬೈಲ್ ಟವರ್ ಸೇರಿದಂತೆ ದೂರವಾಣಿ ಸಂಪರ್ಕದ ಅಭಿವೃದ್ಧಿ, ಪಾಸ್ ಪೋರ್ಟ್ ಸೇವಾ ಕೇಂದ್ರ, ಪ್ರವಾಸೋದ್ಯಮ ಸೇರಿದಂತೆ ಸಮಗ್ರ ಅಭಿವೃದ್ಧಿಯಲ್ಲಿ ರಾಘವೇಂದ್ರ ಅವರ ಕೊಡುಗೆ ಅಪಾರವಾಗಿದೆ.
ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜಕುಮಾರ್ ಅವರನ್ನು ಈಗಾಗಲೇ ಕಣಕ್ಕಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post