ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ದೇಶದ ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದ್ದು ಕಾಂಗ್ರೆಸ್ ಪಕ್ಷ ಮಾತ್ರ. ಬಿಜೆಪಿಯವರು ಸ್ವಾತಂತ್ರಕ್ಕಾಗಿ ಯಾವುದೇ ಹೋರಾಟ ಮಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮಂಗಳೂರು ಗಲಭೆ ಹಿನ್ನೆಲೆಯಲ್ಲಿ ಮಾತನಾಡಿರುವ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭಯದ ವಾತಾವರಣವನ್ನು ಉಂಟು ಮಾಡುತ್ತಿವೆ. ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವಕಾಶ ಮಾಡಿಕೊಡಬೇಕು. ಇದನ್ನು ಹತ್ತಿಕ್ಕುವ ಪ್ರಯತ್ನಗಳನ್ನು ನಾವು ಖಂಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ಐದು ವರ್ಷಗಳಲ್ಲಿ ನಮಗೆ ಎಂದಿಗೂ ಬಂದೂಕಿನ ನೆನಪೇ ಬಂದಿಲ್ಲ. ನಮಗೆ ಬಂದಿದ್ದು, ಜನಪರ ಯೋಜನೆಗಳು ಹಾಗೂ ಬಡವರ ಪರ ಕೆಲಸಗಳು ಮಾತ್ರ. ಆದರೆ, ಯಡಿಯೂರಪ್ಪ ಹಿಂದೆ ಅಧಿಕಾರದಲ್ಲಿದ್ದಾಗಲೂ ಸಹ ರೈತರ ಮೇಲೆ ಗೋಲಿಬಾರ್ ಮಾಡಲಾಗಿತ್ತು. ಈಗ ಮಂಗಳೂರಿನಲ್ಲಿ ಗುಂಡು ಹಾರಿಸುವ ಮೂಲಕ ಭಯದ ವಾತಾವರಣವನ್ನು ನಿರ್ಮಿಸಿ, ಜನರ ಹಕ್ಕುಗಳನ್ನು ಕಸಿಯುತ್ತಿದೆ ಎಂದರು.
ನನಗೆ ಈಗಿನ ಪರಿಸ್ಥಿತಿಯನ್ನು ನೋಡುತ್ತಿದ್ದರೆ ಹಿಟ್ಲರ್ ಆಡಳಿತ ನೆನಪಿಗೆ ಬರುತ್ತಿದೆ. ಇಂತಹ ಕೆಲಸಗಳನ್ನು ನಾವು ತೀವ್ರಗಾಗಿ ಖಂಡಿಸುತ್ತೇವೆ. ಈ ಎಲ್ಲಾ ಘಟನೆಗಳ ಕುರಿತಾಗಿ ಉನ್ನತ ಮಟ್ಟದ ನ್ಯಾಯಾಂಗ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post