ಬೆಂಗಳೂರು: ಸಮ್ಮಿಶ್ರ ಸರ್ಕಾರದ ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸುವಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರು ವಿಳಂಬನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಪ್ರಮುಖರಾದ ಕೆ.ಎಸ್. ಈಶ್ವರಪ್ಪ, ಬಿ. ಶ್ರೀರಾಮುಲು, ಸಿ.ಟಿ. ರವಿ, ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಬಿಜೆಪಿ ಸದಸ್ಯರುಗಳು ಸದನದಲ್ಲೇ ಬೀಡುಬಿಡುವ ಮೂಲಕ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ವಿಶ್ವಾಸ ಮತಯಾಚನೆಗೆ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ ಎಂಬ ವಿಚಾರದಲ್ಲಿ ಸದನದಲ್ಲಿ ಭಾರೀ ಕೋಲಾಹಲ ಏರ್ಪಟ್ಟ ಹಿನ್ನೆಲೆಯಲ್ಲಿ ರಾಜ್ಯಪಾಲರು ಗುರುವಾರವೇ ವಿಶ್ವಾಸಮತ ಪ್ರಕ್ರಿಯೆ ಮುಗಿಸುವಂತೆ ಸ್ಪೀಕರ್’ಗೆ ಸಂದೇಶ ರವಾನಿಸಿದ್ದರು. ಆದರೆ ಅದಾಗಲೇ ಸ್ಪೀಕರ್ ರಮೇಶ್ ಕುಮಾರ್ ತಾವು ಎಜೆ ಉದಯ್ ಹೊಳ್ಳ ಜತೆ ವಿಪ್ ಜಾರಿ ಸಂಬಂಧ ಚರ್ಚೆಗೆ ತೆರಳಿದ್ದ ಕಾರಣ ಸದನವನ್ನು ಉಪಸಭಾಪತಿಗಳು ಮುನ್ನಡೆಸಿದ್ದರು.
ಈ ಬೆಳವಣಿಗೆಯ ನಡುವೆಯೇ, ಶುಕ್ರವಾರ ಮಧ್ಯಾಹ್ನ 1.30ರ ಒಳಗಾಗಿ ಬಹುಮತ ಸಾಬೀತು ಮಾಡಬೇಕು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯಪಾಲ ವಜುಭಾಯಿವಾಲಾ ನಿರ್ದೇಶನ ನೀಡಿದ್ದಾರೆ.

Discussion about this post