ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ರಾಜ್ಯ ಕಮಿಟಿ ಕಳುಹಿಸಿದ್ದ ಪಟ್ಟಿಯನ್ನು ತಿರಸ್ಕರಿಸಿರುವ ಬಿಜೆಪಿ ವರಿಷ್ಠರು ಅಚ್ಚರಿಯ ಬೆಳವಣಿಗೆಯಲ್ಲಿ ಸಾಮಾನ್ಯ ಮುಖಂಡರಿಗೆ ಟಿಕೇಟ್ ಘೋಷಿಸಿದೆ.
ಬಿಜೆಪಿ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯವರಿಗೆ ಟಿಕೆಟ್ ನೀಡಿದ್ದು, ಒಂದರ್ಥದಲ್ಲಿ ಉತ್ತರ ಹಾಗೂ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಮಣೆ ಹಾಕಿದ್ದಾರೆ ಕಮಲ ವರಿಷ್ಠರು.
ರಾಜ್ಯಸಭಾ ಚುನಾವಣೆ ಟಿಕೆಟ್’ಗಾಗಿ ಬಿಜೆಪಿಯಲ್ಲಿ ಭಾರಿ ಪೈಪೋಟಿ ನಡೆದಿತ್ತು. ತಮ್ಮ ಸಹೋದರ ರಮೇಶ್ ಕತ್ತಿಯವರಿಗೆ ಟಿಕೇಟ್ ನೀಡಬೇಕೆಂದು ಶಾಸಕ ಉಮೇಶ್ ಕತ್ತಿ ಪಕ್ಷದ ನಾಯಕರ ಮೇಲೆ ಒತ್ತಡ ಹಾಕಿದ್ದರು. ಹಾಲಿ ರಾಜ್ಯಸಭಾ ಸಂಸದ ಪ್ರಭಾಕರ ಕೋರೆಯವರು ಕೂಡಾ ಪುನಾರಾಯ್ಕೆ ಬಯಸಿ ಟಿಕೆಟ್ ಆಕಾಂಕ್ಷೆ ಹೊಂದಿದ್ದರು. ಕರಾವಳಿ ಕರ್ನಾಟಕದ ಹೋಟೆಲ್ ಉದ್ಯಮಿ ಕೆ ಪ್ರಕಾಶ್ ಶೆಟ್ಟಿಯವರ ಹೆಸರು ಕೂಡಾ ಕೊನೆಯ ಕ್ಷಣದಲ್ಲಿ ಕೇಳಿ ಬಂದಿತ್ತು.
Get In Touch With Us info@kalpa.news Whatsapp: 9481252093






Discussion about this post