ಚೆನ್ನೈ: 2019ನೆಯ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷೆ ತಮಿಳಿಸೈ ಸೌಂದರ್‌ರಾಜನ್ ಸೂಚಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಆಕೆ, ವಿಶ್ವದ ಅತ್ಯಂತ ದೊಡ್ಡ ಆರೋಗ್ಯ ರಕ್ಷಣೆ ಕಾರ್ಯಕ್ರಮ ಆಯುಷ್ಮಾನ್ ಭಾರತವನ್ನು ಆರಂಭಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರ ಹೆಸರನ್ನು 2019 ನೆಯ ಸಾಲಿನ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ತಮಿಳಿಸೈ ಸೌಂದರರಾಜನ್ ಪತಿ ಡಾ. ಪಿ. ಸೌಂದರರಾಜನ್ ಅವರು ಖಾಸಗಿ ವಿವಿಯಲ್ಲಿ ಪ್ರೊಫೆಸರ್ ಆಗಿದ್ದು, ಅವರೂ ನೊಬೆಲ್ ಪುರಸ್ಕಾರಕ್ಕಾಗಿ ಮೋದಿಯವರ ಹೆಸರನ್ನು ಸೂಚಿಸಿದ್ದಾರೆ.
2019 ನೆಯ ಸಾಲಿನ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಹೆಸರನ್ನು ಸೂಚಿಸಲು ಜನವರಿ 31, 2019 ಕೊನೆ ದಿನವಾಗಿದ್ದು, ಸೆಪ್ಟೆಂಬರ್ ನಲ್ಲಿ ನಾಮಕರಣ ಪ್ರಕ್ರಿಯೆ ಆರಂಭಗೊಳ್ಳುತ್ತದೆ.
Discussion about this post