ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಸಂಜೆಯೊಳಗೆ ಘೋಷಣೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರಾಷ್ಟç ರಾಜಧಾನಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ ಹಲವು ಸುತ್ತಿನ ಸಭೆ ನಡೆದಿದ್ದು, ಇಂದು ಅಂತಿಮ ಸುತ್ತಿನ ಸಭೆ ನಡೆಯಲಿದೆ. ಆನಂತರ ಇಂದು ಸಂಜೆಯೊಳಗೆ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದಿದ್ದಾರೆ.
ಮೊದಲ ಪಟ್ಟಿಯಲ್ಲಿ ಸುಮಾರು 170 ರಿಂದ 180 ಅಭ್ಯರ್ಥಿಗಳ ಹೆಸರು ಘೋಷಣೆಯಾಗುವ ಸಾಧ್ಯತೆಯಿದೆ ಎಂದಿರುವ ಯಡಿಯೂರಪ್ಪ, ಕೆಲವರನ್ನು ಹೊರತುಪಡಿಸಿ ಇನ್ನೆಲ್ಲಾ ಹಾಲಿ ಶಾಸಕರಿಗೆ ಟಿಕೇಟ್ ದೊರೆಯಲಿದೆ ಎನ್ನುವ ಮೂಲಕ ಕುತೂಹಲ ಕೆರಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post