ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭಾ ಚುನಾವಣೆ #LoksabhaElection ದಿನಾಂಕ ಘೋಷಣೆಗೂ ಮುನ್ನವೇ ಬಿಜೆಪಿ #BJP ತನ್ನ ಮೊದಲ 100 ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲು ಮುಂದಾಗಿದ್ದು, ಮಾಹಿತಿಯಂತೆ ಫೆ.29ರಂದು ಹೊರಬೀಳಲಿದೆ ಎಂದು ವರದಿಯಾಗಿದೆ.
ಫೆ.29ರಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಂದೇ ಮೊದಲ 100 ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲಾಗುತ್ತದೆ ಎನ್ನಲಾಗಿದೆ.
ಮೊದಲ ಪಟ್ಟಿಯಲ್ಲಿ ಮೋದಿ ಹೆಸರು?
ಇನ್ನು, ಗೆಲುವು ಖಚಿತ ಎನ್ನಲಾದ ಪ್ರಭಾವಿ ಅಭ್ಯರ್ಥಿಗಳ ಹೆಸರನ್ನು ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡುವ ಸಾಧ್ಯತೆಯಿದೆ.
ಪ್ರಮುಖವಾಗಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹೆಸರುಗಳೂ ಸಹ ಮೊದಲ ಪಟ್ಟಿಯಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ.
ಬಿಜೆಪಿಯ ಮೊದಲ ಪಟ್ಟಿಯ ನಿರ್ಣಾಯಕವಾಗಿದ್ದು, ಭಾರೀ ಕುತೂಹಲ ಕೆರಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post