ಜಮ್ಮು: ಇಲ್ಲಿನ ಬಸ್ ನಿಲ್ದಾಣದಲ್ಲಿ ಭಾರೀ ಪ್ರಮಾಣದಲ್ಲಿ ಗ್ರೆನೇಡ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 28 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
12 ಗಂಟೆ ವೇಳೆಗೆ ಘಟನೆ ನಡೆದಿದ್ದು, ಬಸ್ ನಿಲ್ದಾಣದಲ್ಲಿ ಜನರು ಹೆಚ್ಚಿದ್ದ ವೇಳೆ ಸ್ಫೋಟ ಸಂಭವಿಸಿದೆ.
ಈ ಕುರಿತಂತೆ ಮಾತನಾಡಿರುವ ಜಮ್ಮು ಐಜಿಪಿ ಎಂ.ಕೆ. ಸಿನ್ಹಾ, ಗ್ರೆನೇಡ್ ಸ್ಪೋಟ ತೀವ್ರತರವಾಗಿದ್ದರು, ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಈವರೆಗೂ ಸಂಭವಿಸಿಲ್ಲ. ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ.
Jammu: Visuals from a hospital where people who were injured in a blast at a bus stand have been admitted for treatment. pic.twitter.com/Cu6FfIqDjI
— ANI (@ANI) March 7, 2019
ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಇನ್ನು, ಸ್ಪೋಟಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ಉಗ್ರನನ್ನು ಬಂಧಿಸಲಾಗಿದ್ದು, ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ಇಡಿಯ ಪ್ರದೇಶದಲ್ಲಿ ಭದ್ರತಾ ಪಡೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಲಾಗಿದ್ದು, ಸುತ್ತಮುತ್ತಲ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಲಾಗಿದೆ.
Discussion about this post