ಕಲ್ಪ ಮೀಡಿಯಾ ಹೌಸ್ | ಜಲ್ನಾನಗರ(ಮಹಾರಾಷ್ಟ್ರ) |
ಗಜ್ ಕೇಸರಿ ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು #BoilerBlast 22ಕ್ಕೂ ಅಧಿಕ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿರುವ ದಾರುಣ ಘಟನೆ ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿ ಇಂದು ನಡೆದಿದೆ.
ಇಂದು ಮಧ್ಯಾಹ್ನ ಘಟನೆ ಸಂಭವಿಸಿದ್ದು, ಬಾಯ್ಲರ್ ಸ್ಪೋಟಗೊಂಡ ಪರಿಣಾಮ ಕರಗಿದ ಕಬ್ಬಿಣ ಕಾರ್ಮಿಕರ ಮೈಮೇಲೆ ಬಿದ್ದಿದೆ. ಪರಿಣಾಮವಾಗಿ ಹಲವು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, ಇವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಗಾಯಾಳುಗಳನ್ನು ಛತ್ರಪತಿ ಸಂಭಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಾವರದಲ್ಲಿನ ಸ್ಟೀಲ್ ರಾಡ್’ಗಳನ್ನು ತಯಾರಿಸಲಾಗುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
ಗಾಯಗೊಂಡಿರುವ ಕಾರ್ಮಿಕರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳುತ್ತಿದ್ದು, ಕಂಪನಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post