ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮುಂಬೈ: ಬಾಲಿವುಡ್ ದಂತಕತೆ, ಸ್ಪುರದ್ರೂಪಿ ನಟ ರಿಷಿ ಕಪೂರ್(67) ಇಂದು ಇಹಲೋಕ ತ್ಯಜಿಸಿದ್ದಾರೆ.
2018ರಲ್ಲಿ ಕ್ಯಾನ್ಸರ್ ಗೆ ತುತ್ತಾಗಿದ್ದ ಇವರು ನ್ಯೂಯಾರ್ಕ್‌ನಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಉಸಿರಾಟದ ಸಮಸ್ಯೆ ಕಂಡುಬಂದಿದ್ದರಿಂದ ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.
ಇನ್ನು ರಿಷಿ ಕಪೂರ್ ನಿಧನಕ್ಕೆ ಬಾಲಿವುಡ್ ಪ್ರಮುಖರು ಸೇರಿದಂತೆ ದೇಶದ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ.
Get in Touch With Us info@kalpa.news Whatsapp: 9481252093

















