ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಗರದ ಇಸ್ರೋ (ISRO) ಪ್ರಧಾನ ಕಚೇರಿಗೆ ಗುರುವಾರ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ಶ್ವಾನದಳ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (BDDS) ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದರು.
ಮುನ್ನೆಚ್ಚರಿಕಾ ಕ್ರಮವಾಗಿ ಕಟ್ಟಡದಲ್ಲಿದ್ದ ಎಲ್ಲ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಸ್ಥಳಾಂತರಿಸಿ, ಕಚೇರಿಯ ಪ್ರತಿಯೊಂದು ಭಾಗವನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು. ಹಲವು ಗಂಟೆಗಳ ಕಾಲ ನಡೆದ ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತು ಪತ್ತೆಯಾಗಲಿಲ್ಲ.

Also read: ಜುಲೈ 5 | PESITM ಕಾಲೇಜಿನಲ್ಲಿ ಪಿಯು ವಿಜ್ಞಾನ ಉಪನ್ಯಾಸಕರಿಗಾಗಿ ‘ಎಐ ಬೋಧನಾ ಕಾರ್ಯಾಗಾರ’
ಪರಿಶೀಲನೆಯ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದ್ದು, ಪರಿಸ್ಥಿತಿ ಸಹಜಗೊಂಡ ನಂತರ ಸಿಬ್ಬಂದಿಗೆ ಮತ್ತೆ ಕಚೇರಿಗೆ ಪ್ರವೇಶ ನೀಡಲಾಯಿತು.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಬೆದರಿಕೆ ಇಮೇಲ್ ಕಳುಹಿಸಿದವರನ್ನು ಪತ್ತೆಹಚ್ಚಲು ಪೊಲೀಸರು ತಾಂತ್ರಿಕ ತನಿಖೆ ಕೈಗೊಂಡಿದ್ದಾರೆ. ಇಮೇಲ್‌ನ ಮೂಲ, ಐಪಿ ವಿಳಾಸ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








