ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ (DistrictCourt) ಬಾಂಬ್ ಮೂಲಕ ಉಡಾಯಿಸುವುದಾಗಿ ಬಂದ ಇ ಮೇಲ್ ಒಂದು ಹುಸಿ ಬಾಂಬ್ ಬೆದರಿಕೆ (BombThreat) ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಹೇಳಿದ್ದಾರೆ.
ಜಿಲ್ಲಾ ನ್ಯಾಯಾಲಯವನ್ನು ಉಡಾಯಿಸುತ್ತೇವೆ ಎಂಬ ಬೆದರಿಕೆ ಇಮೇಲ್ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಅವರು ಮಾತನಾಡಿದರು.
ಶಿವಮೊಗ್ಗ ಎಸ್’ಪಿ ಹೇಳಿದ್ದೇನು?
ನಿನ್ನೆ ರಾತ್ರಿ ಅಂದರೆ ಇಂದು ನಸುಕಿನ 1.37ಕ್ಕೆ ಇ ಮೇಲ್ ಮೂಲಕ ಬೆದರಿಕೆ ಬಂದಿದ್ದು, ಮೊದಲ ಸಾಲಿನಲ್ಲೇ (Shivamogga) ಶಿವಮೊಗ್ಗ ಜಿಲ್ಲಾ ನ್ಯಾಯಾಲಯವನ್ನು ಉಡಾಯಿಸುವುದಾಗಿ ಹೇಳಲಾಗಿದೆ. ಈ ವಿಚಾರ ತಿಳಿದಾಕ್ಷಣ ಎಸಿ ತಂಡ, ಅಧಿಕಾರಿ ಹಾಗೂ ಸಿಬ್ಬಂದಿಗಳು, ಎಂಎಫ್’ಎಂಡಿ, ಎಚ್’ಎಚ್’ಎಡಿ ಹಾಕಲಾಗಿದ್ದು, ನ್ಯಾಯಾಲಯ ಕಟ್ಟಡಕ್ಕೆ ತೆರಳಿ ಸಂಪೂರ್ಣ ತಪಾಸಣೆ ನಡೆಸುತ್ತಿದೆ ಎಂದರು.
Also Read>> ತುಮಕೂರು: 30 ಲಕ್ಷದ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಲೆ | ಅಪಘಾತ ನಾಟಕ ಬಯಲು
ನ್ಯಾಯಾಲಯ ಕಟ್ಟಡದ ಪ್ರತಿ ಕೊಠಡಿಗಳನ್ನು, ಪ್ರತಿ ಮೂಲೆ ಮೂಲೆಯಲ್ಲೂ ಸಹ ತಪಾಸಣೆ ನಡೆಸಲಾಗುತ್ತಿದೆ. ಆದರೆ, ಈವರೆಗೂ ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳ ಕಂಡು ಬಂದಿಲ್ಲ. ಎಲ್ಲವೂ ದೈನಂದಿನ ರೀತಿಯಲ್ಲೇ ನಡೆಯುತ್ತಿದೆ ಎಂದರು.
ಪ್ರತಿಯೊಬ್ಬರನ್ನೂ ಸಹ ತಪಾಸಣೆ ಮಾಡಿ ಒಳಗೆ ಬಿಡಲಾಗುತ್ತಿದ್ದು, ಈವರೆಗೂ ಯಾವುದೇ ರೀತಿಯಲ್ಲಿ ತೊಂದರೆಯಾಗಿಲ್ಲ ಹಾಗೂ ಅನುಮಾನಾಸ್ಪದ ವಸ್ತುಗಳು ದೊರೆತಿಲ್ಲ. ಈವರೆಗಿನ ಪ್ರಾಥಮಿಕ ತನಿಖೆಯಂತೆ ಇದೊಂದು (Fake Bomb Threat) ಹುಸಿ ಬಾಂಬ್ ಬೆದರಿಕೆಯಾಗಿದೆ. ಈ ಕುರಿತಂತೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಯಿಂದ ಬೆದರಿಕೆ ಇ ಮೇಲ್ ಮೂಲವನ್ನು ಪತ್ತೆ ಮಾಡಲಾಗುತ್ತದೆ ಎಂದಿದ್ದಾರೆ.
ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ
ಇನ್ನು, ಬೆದರಿಕೆ ಹಾಕಿ ಬಂದಿರುವ ಇ ಮೇಲ್’ನಲ್ಲಿ ತಮಿಳುನಾಡು ಮಾಜಿ ಸಿಎಂ ಪುತ್ರ ಉದಯನಿಧಿ ಸ್ಟಾಲಿನ್ (Udayanidhi Stalin) ಅವರ ಹೆಸರು ಉಲ್ಲೇಖವಾಗಿಎ ಎಂದು ಎಸ್’ಪಿ ತಿಳಿಸಿದ್ದಾರೆ.
Also Read>> ಲಿವ್-ಇನ್ ಸಂಬಂಧಕ್ಕೆ ಅಡ್ಡಿ: ಟೆಕ್ಕಿ ಯುವತಿ ಬಂಧನ, ಕುಟುಂಬದ ಮೂವರ ಹತ್ಯೆ ಪ್ರಕರಣ
ಮೊದಲ ಸಾಲಿನಲ್ಲೇ ಶಿವಮೊಗ್ಗ ಜಿಲ್ಲಾ ನ್ಯಾಯಾಲಯವನ್ನು ಉಡಾಯಿಸುವುದಾಗಿ ಬೆದರಿಕೆ ಹಾಕಲಾಗಿದೆ. ನಂತರದಲ್ಲಿ ಉದಯನಿಧಿ ಸ್ಟಾಲಿನ್ ಅವರ ವಿರುದ್ಧದ ಒಂದು ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂಬುದನ್ನು ಉಲ್ಲೇಖಿಸಲಾಗಿದೆ ಎಂದಿದ್ದಾರೆ.
ಯಾವ ಪ್ರಕರಣ ಎಂಬುದರ ಕುರಿತಾಗಿ ನಮಗೆ ಯಾವುದೇ ರೀತಿಯಲ್ಲೂ ಸಹ ಮಾಹಿತಿಯಿಲ್ಲ. ಚೆನ್ನೈ ನಗರದಲ್ಲಿನ ಪ್ರಕರಣವನ್ನು ಇಲ್ಲಿಗೆ ಲಿಂಕ್ ಮಾಡಲಾಗಿದೆ. ಹೀಗಾಗಿ, ತಮಿಳುನಾಡು(Tamilnadu) ಪೊಲೀಸರೊಂದಿಗೆ ಚರ್ಚಿಸಿ, ಮುಂದಿನ ತನಿಖೆಯನ್ನು ಚುರುಕುಗೊಳಿಸಲಾಗುವುದು ಎಂದರು.
ಅಲ್ಲದೇ, ಉಡುಪಿ ಸೇರಿದಂತೆ ಬೇರೆ ಜಿಲ್ಲೆಗಳ ನ್ಯಾಯಾಲಯಕ್ಕೂ ಸಹ ಇದೇ ರೀತಿಯಲ್ಲಿ ಬೆದರಿಕೆ ಇ ಮೇಲ್ ಬಂದಿದೆ ಎಂಬ ಮಾಹಿತಿ ಇದೆ. ತನಿಖೆಯಲ್ಲಿ ಇದನ್ನೆಲ್ಲಾ ಪರಿಗಣಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಗ್ಯಾಸ್ ಸಿಲಿಂಡರ್ ಬಳಸಿ ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಆದರೆ, ನಮ್ಮ ಸಿಬ್ಬಂದಿ ಸಂಪೂರ್ಣ ತಪಾಸಣೆ ನಡೆಸಿದ್ದು, ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳು ದೊರೆತಿಲ್ಲ ಎಂದರು.
Also Read>> ನಾರಾಯಣ ಹೆಲ್ತ್ ಸಂಸ್ಥೆಯಿಂದ ವಿಶೇಷ ಮಕ್ಕಳಿಗಾಗಿ ಸುಲಭ ಶೌಚಾಲಯ ಉದ್ಘಾಟನೆ
ನ್ಯಾಯಾಲಯದ ಕಲಾಪಗಳು ಎಂದಿನಂತೆಯೇ ನಡೆಯತ್ತಿದೆ. ಯಾವುದೇ ವ್ಯತ್ಯಾಸವಾಗಿಲ್ಲ. ನ್ಯಾಯಾಲಯಕ್ಕೆ ಒದಗಿಸಲಾಗಿರುವ ಭದ್ರತೆ ಹಾಗೂ ಭದ್ರತಾ ತಪಾಸಣೆ ಸಂಜೆ ಕಲಾಪಗಳು ಮುಕ್ತಾಯವಾಗುವವರೆಗೂ ಮುಂದುವರೆಯಲಿವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















