ಕಲ್ಪ ಮೀಡಿಯಾ ಹೌಸ್ | ಸಾಗರ(ಶಿವಮೊಗ್ಗ) |
ಆಟವಾಡುತ್ತಾ ಸಂತೋಷದಿಂದ ಇರಬೇಕಾಗಿದ್ದ ಆರು ವರ್ಷದ ಬಾಲಕನೊಬ್ಬ ದಿಢೀರ್ ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ನಡೆದಿದೆ.
ಕೊಡನವಳ್ಳಿ ಗ್ರಾಮದ ನಿವಾಸಿಗಳಾದ ಗೌತಮ್ ಜೈನ್ ಮತ್ತು ಶಿಲ್ಪಾ ದಂಪತಿಯ ಪುತ್ರ, 6 ವರ್ಷದ ತ್ರಿಲೋಕ್ ಜೈನ್ ಮೃತ ದುರ್ದೈವಿ. ಈತ ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಓದುತ್ತಿದ್ದ.
Also Read>> ಆರ್ಥಿಕ ಒತ್ತಡ ಮಧ್ಯೆ ವಿದೇಶಿ ಬಂಡವಾಳ ಆಕರ್ಷಣೆಗೆ ಭಾರತ ಹೊಸ ತಂತ್ರ
ಶನಿವಾರ ಮಧ್ಯಾಹ್ನ ಶಾಲಾ ಅವಧಿ ಮುಗಿಯುವ ಮುನ್ನ, ಬಾಲಕ ತ್ರಿಲೋಕ್ ಎಂದಿನಂತೆ ಶಾಲಾ ಆವರಣದಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾನೆ.
ಘಟನೆಯನ್ನು ಗಮನಿಸಿದ ಶಾಲಾ ಸಿಬ್ಬಂದಿ ಹಾಗೂ ಸ್ಥಳೀಯರು ತಕ್ಷಣವೇ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲು ಕ್ರಮ ಕೈಗೊಂಡರು. ಆದರೆ ದುರದೃಷ್ಟವಶಾತ್ ಮಾರ್ಗಮಧ್ಯದಲ್ಲೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬಾಲಕನ ಅಕಾಲಿಕ ಸಾವಿಗೆ ತೀವ್ರ ಹೃದಯಾಘಾತವೇ ಕಾರಣ ಎಂದು ತಿಳಿದುಬಂದಿದೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮತ್ತು ಶೋಕವನ್ನು ಉಂಟುಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
FIFA ವಿಶ್ವಕಪ್ 2026 | ಸ್ವೀಡನ್‌ಗೆ ಭರ್ಜರಿ ಜಯ | ಟುನೀಶಿಯಾ ವಿರುದ್ಧ 5–1 ಅಂತರದ ಗೆಲುವು




















