ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತೀರ್ಥಹಳ್ಳಿ ತಾಲೂಕಿನ ಗುಂಡುಗದ್ದೆ ಬಳಿ ಇಂದು ಹೃದಯಾವಿದ್ರಾವಕ ಘಟನೆಯೊಂದು ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ತ್ರಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆಪಾಲ್ ಸಮೀಪದ ಗುಂಡುಗದ್ದೆಯ ಪತ್ರಕರ್ತ ಪ್ರಗತ್.ಕೆ.ಆರ್ ಮತ್ತು ರಂಜನಾ ದಂಪತಿಯ 6 ವರ್ಷದ ಪುತ್ರ ಋಷ್ಯ ಎಂಬಾತನು ಆಟವಾಡುತ್ತಾ ರಸ್ತೆಗೆ ಬಂದಾಗ ಕಾರು ಡಿಕ್ಕಿ ಹೊಡೆದಿದೆ.

Also read: Shivamogga | ಕಾರ್ಮಿಕನ ಕೊಲೆ, ಕೃತ್ಯಕ್ಕೆ ಕಾರಣವಾಯ್ತಾ ಬುದ್ಧಿ ಮಾತು!
ಮನೆಯ ಪಕ್ಕದಲ್ಲಿ ಲಾರಿ ನಿಂತಿದ್ದರಿಂದ ಮಗು ರಸ್ತೆಯಲ್ಲಿ ಇರುವುದು ಕಾರು ಚಾಲಕನಿಗೆ ಗೋಚರಿಸದ ಪರಿಣಾಮ ಕಾರು ಡಿಕ್ಕಿ ಹೊಡೆದಿದೆ. ತಕ್ಷಣವೇ ಸ್ಥಳದಲ್ಲಿದ್ದ ಪೋಷಕರು ಮಗುವನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಘಟನೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









