ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: 6 ಹಾಗೂ 9ನೆಯ ತರಗತಿ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತಾಗಿ ಅವಹೇಳನಕಾರಿಯಾಗಿ ಪಠ್ಯವಿದ್ದು, ಇದನ್ನು ತೆಗೆದುಹಾಕುವಂತೆ ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಕುರಿತಂತೆ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿಯವರು ಸಿಎಂಗೆ ಮನವಿ ಸಲ್ಲಿಸಿ ಮಾತನಾಡಿದರು.
ಕರ್ನಾಟಕ ಸರ್ಕಾರ ತಂದಿರುವ 6-9ನೆಯ ತರಗತಿ ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುವ ವಿಷಯ ಸೇರಿಸಿರುವುದು ಬಹಳ ಆಘಾತಕಾರಿಯಾಗಿದೆ. ಇದು ಬೆಳೆಯುತ್ತಿರುವ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.
ವೇದಗಳ ಕಾಲದಲ್ಲಿ ಆಚರಿಸುತ್ತಿದ್ದ ಯಜ್ಞ ಮತ್ತು ಯಾಗಗಳಲ್ಲಿ ಆಹಾರ ಧಾನ್ಯ, ಹಾಲು, ತುಪ್ಪವನ್ನು ಹವಿಸ್ಸು ಎಂದು ಧರಿಸುತ್ತಿದ್ದರಿಂದ ಆಹಾರದ ಅಭಾವ ಸೃಷ್ಠಿಯಾಗಿತ್ತು ಎಂದು ಕಪೋಲಕಲ್ಪಿತವಾಗಿ ಉಲ್ಲೇಖಿಸಿ ಸನಾತನ ಸಂಪ್ರದಾಯ ಆಚರಣೆಗೆ ಅವಮಾನ ಮಾಡಿದ್ದಾರೆ. ವೈದಿಕ ಆಚರಣೆಗಳು ದುಬಾರಿಯಾಗಿದ್ದು ಸಂಸ್ಕೃತ ಮಂತ್ರದ ಮೂಲಕ ನಡೆಸುತ್ತಿದ್ದರಿಂದ ಜನಸಾಮಾನ್ಯರಿಗೆ ಲಭ್ಯವಾಗುತ್ತಿರಲಿಲ್ಲ ಹಾಗೂ ಅರ್ಥವಾಗುತ್ತಿರಲಿಲ್ಲ. ವರ್ಣ ವ್ಯವಸ್ಥೆಯಿಂದ ಸಾಮಾಜಿಕ ವಿಘಟನೆಯಾಯಿತು ಎಂಬ ಸತ್ಯಕ್ಕೆ ದೂರವಾದ ಅಂಶಗಳನ್ನು ಉಲ್ಲೇಖಸಿರುವುದು ವಿಷದನೀಯ. ಇದು ಬ್ರಾಹ್ಮಣ ಸಮುದಾಯವನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಬಿಂಬಿಸುವ ಹಾಗೂ ಆ ಮೂಲಕ ನಾಡಿನ ಯುವಜನತೆಗೆ ತಪ್ಪು ಸಂದೇಶ ನೀಡುವ ಹೇಯ ಕೆಲಸವಾಗಿದೆ. ಆದ್ದರಿಂದ ಈ ಪಠ್ಯಪುಸ್ತಕಗಳಿಂದ ಸತ್ಯಕ್ಕೆ ದೂರವಾಗಿರುವ ಈ ಅಂಶಗಳನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post