ಕೂಚ್ ಬೆಹರ್: ಚುನಾವಣೆ ವೇಳೆ ನಿರಂತರವಾಗಿ ಗೂಂಡಾಗಿರಿ ಪ್ರದರ್ಶನ ಮಾಡುತ್ತಾ, ಅಹಿತಕರ ಘಟನೆ ನಡೆಸಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆಂಬಲಿಗರ ದಾಂಧಲೆ ಮುಂದುವರೆದಿದ್ದು, ಬಿಜೆಪಿಯ ಮೂವರು ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಇಲ್ಲಿ ನಿನ್ನೆ ರಾತ್ರಿ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಭೆಯ ವೇಳೆ ಬಿಜೆಪಿ ಬೆಂಬಲಿಗರ ಮೇಲೆ ಟಿಎಂಸಿ ಬೆಂಬಲಿಗರು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಮೂವರು ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಲ್ಲದೇ, ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಅಂಗಡಿಯೊಂದನ್ನೂ ಸಹ ಮಮತಾ ಬೆಂಬಲಿಗರು ಧ್ವಂಸ ಮಾಡಿದ್ದಾರೆ.
Discussion about this post