ಪಾಂಡವಪುರ: ತಾಲೂಕಿನ ಕನಗನಮರಡಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ವಿಸಿ ನಾಲೆಗೆ ಖಾಸಗಿ ಬಸ್ ಉರುಳಿದ್ದು, 25ಕ್ಕೂ ಅಧಿಕ ಮಂದಿ ಭೀಕರವಾಗಿ ಸಾವನ್ನಪ್ಪಿದ್ದಾರೆ.
ಪಾಂಡವಪುರದಿಂದ ಮಂಡ್ಯ ಕಡೆಗೆ ತೆರಳುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಬಸ್ ನಾಲೆಗೆ ಉರುಳಿದೆ ಎಂದು ಪ್ರಾಥಮಿಕ ವರದಿಯಂತೆ ತಿಳಿದು ಬಂದಿದೆ.
ಚಾಲಕನ ನಿರ್ಲಕ್ಷ್ಯದಿಂದ ಖಾಸಗಿ ಬಸ್ ಉರುಳಿದೆ ಎಂದು ಸ್ಥಳೀಯರು ಆರೋಪಿಸಿದ್ದು, ಘಟನೆಯಲ್ಲಿ ಇನ್ನು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಈಗಾಗಲೇ ತುರ್ತು ಕಾರ್ಯಾಚರಣೆ ನಡೆಸಿ 20 ಶವಗಳನ್ನು ಹೊರತೆಗೆಯಲಾಗಿದ್ದು, ಶವಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ಬಾಲಕನೋರ್ವ ಪವಾಡಸದೃಶ್ಯ ರೀತಿಯಲ್ಲಿ ಪಾರಾಗಿದ್ದಾನೆ.
ಚಾಲಕನ ನಿರ್ಲಕ್ಷ್ಯದಿಂದ ನಾಲೆಗೆ ಉರುಳಿದೆ ಹೇಳಲಾಗಿದ್ದು, ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಘಟನೆ ಕುರಿತಂತೆ ದಿಗ್ಬ್ರಮೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಚಲನಚಿತ್ರ ಪ್ರಶಸ್ತಿ ಸಮಾರಂಭ ಸೇರಿದಂತೆ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ಮುಂದೂಡಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಅಲ್ಲದೇ, ಎಲ್ಲ ರೀತಿಯ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕನಗನಮರಡಿ ಬಳಿ ವಿಸಿ ನಾಲೆಗೆ ಬಸ್ ಬಿದ್ದು 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಕುರಿತು ಸಿಎಂ ಕುಮಾರಸ್ವಾಮಿ ದಿಗ್ಭ್ರಮೆ ವ್ಯಕ್ತ ಪಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ಸ್ಥಳಕ್ಕೆ ಕೂಡಲೇ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸುವ ಬಗ್ಗೆ ಸೂಚನೆಗಳನ್ನು ನೀಡಿದ್ದಾರೆ.— CM of Karnataka (@CMofKarnataka) November 24, 2018
ಕನಗನಮರಡಿಗೆ ಸಿಎಂ|ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಮುಂದಕ್ಕೆ
_
ಮುಖ್ಯಮಂತ್ರಿಗಳು ತಮ್ಮ ಇಂದಿನ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಪಡಿಸಿ ಪಾಂಡವಪುರ- ಕನಗನಮರಡಿ ಗ್ರಾಮದ ಬಸ್ ಅಪಘಾತ ನಡೆದ ಸ್ಥಳಕ್ಕೆ ಧಾವಿಸಲಿದ್ದಾರೆ.ಇಂದು ಸಂಜೆ ನಡೆಯಬೇಕಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ pic.twitter.com/eahedQWKUl— CM of Karnataka (@CMofKarnataka) November 24, 2018
ಇನ್ನು ಈ ಕುರಿತಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಬಸ್ ಚಾಲಕನ ನಿರ್ಲಕ್ಷ ಎಂದು ತಿಳಿದುಬಂದಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿ ತರಿಸಿಕೊಂಡು ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ.
25 people have died. I believe the driver was not driving properly, I will find out, take some more inputs: Deputy Karnataka CM G Parameshwara on the incident where a bus fell into a canal near Mandya in Karnataka today. pic.twitter.com/8aHjXLXhTM
— ANI (@ANI) November 24, 2018
Discussion about this post