ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ/ಬೆಂಗಳೂರು |
ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟ Rameshwaram Cafe Blast ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಳ್ಳಾರಿಯಲ್ಲಿ ಶಬ್ಬೀರ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಅಧಿಕಾರಿಗಳು ಇಂದು ನಸುಕಿನಲ್ಲಿ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದು, ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಶಂಕಿತ ಉಗ್ರ ಬಳ್ಳಾರಿಗೆ ಬಂದ ಸಮಯದಲ್ಲಿ ಕೌಲ್ ಬಜಾರ್ ನಿವಾಸಿ ಶಬ್ಬೀರ್’ನನ್ನು ಭೇಟಿ ಮಾಡಿದ್ದ. ಅಲ್ಲದೇ ಹೈದರಾಬಾದ್’ಗೆ ಹೋಗಲು ಆತನಿಗೆ ಸಹಾಯ ಮಾಡಿದ್ದ ಎನ್ನುವ ಆರೋಪದ ಮೇಲೆ ಅಧಿಕಾರಿಗಳು ಶಬ್ಬೀರ್’ನನ್ನು ವಶಕ್ಕೆ ಪಡೆದಿದಾರೆ. ಸದ್ಯ ಶಂಕಿತ ಉಗ್ರ ಹೈದರಾಬಾದ್’ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಇನ್ನೊಂದು ಆಯಾಮದಲ್ಲಿ ಸ್ಪೋಟದ ದಿನ ಹೊಟೇಲ್’ಗೆ ಬಂದಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ವ್ಯಕ್ತಿ ಈತನೇ ಎಂಬ ಕುರಿತಾಗಿಯೂ ಸಹ ಒಂದು ಸಂಶಯವಿದ್ದು, ಈ ಕುರಿತಂತೆಯೂ ಸಹ ತನಿಖೆ ನಡೆದಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news