ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಚನ್ನಗಿರಿ ರಸ್ತೆಯಲ್ಲಿರುವ ರೈಸ್ ಮಿಲ್ #RiceMill ಒಂದರಲ್ಲಿ ಬಾಯ್ಲರ್ ಸ್ಪೋಟಗೊಂಡಿದ್ದು, #BoilerExplosion ಪರಿಣಾಮವಾಗಿ ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ನಡೆದಿದೆ.
ಚನ್ನಗಿರಿ ರಸ್ತೆಯ ಸೀಗೆ ಬಾಗಿಯಲ್ಲಿರುವ ರೈಸ್ ಮಿಲ್’ನಲ್ಲಿ ಬಾಯ್ಲರ್ ಸ್ಪೋಟಗೊಂಡಿದ್ದು, ಪರಿಣಾಮವಾಗಿ ಕಟ್ಟಡ ಕುಸಿದಿದೆ ಎಂದು ವರದಿಯಾಗಿದೆ.
ಸ್ಪೋಟದ ರಭಸಕ್ಕೆ ಮಿಲ್ ಕಟ್ಟಡ ಭಾಗಶಃ ಕುಸಿದಿದ್ದು, ಐವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಇನ್ನೊಬ್ಬರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ಬಾಯ್ಲರ್ ಸ್ಪೋಟಗೊಂಡ ಪರಿಣಾಮ ಹಲವು ವಸ್ತುಗಳು ಹಾರಿಹೋಗಿದ್ದು, ಇದು ಬಡಿದು ಹಲವರಿಗೆ ಗಾಯಗಳಾಗಿವೆ.
ಮಿಲ್’ನಲ್ಲಿ ಒಟ್ಟು ಆರು ಮಂದಿ ಇದ್ದರು. ಗಂಭೀರವಾಗಿ ಗಾಯಗೊಂಡಿರುವ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೊಬ್ಬರನ್ನು ಹುಡುಕಲಾಗುತ್ತಿದೆ.
Also read: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ
ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದ್ದು, ಸ್ಥಳದಲ್ಲಿ ಆಂಬುಲೆನ್ಸ್’ಗಳು ಬೀಡು ಬಿಟ್ಟಿವೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post