ನವದೆಹಲಿ: ನಾಥೂರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಹಿಂದೂ ಉಗ್ರ ಎಂದು ಹೇಳಿಕೆ ನೀಡಿದ ನಟ ಕಂ ರಾಜಕಾರಣಿ ಕಮಲ್ ಹಾಸನ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಈ ಕುರಿತಂತೆ ಕಮಲ್ ಹಾಸನ್ ಹೇಳಿಕೆಯನ್ನು ಅತ್ಯಂತ ಗಂಭೀರವಾಗಿ ವಿರೋಧಿಸಿರುವ ಬಿಜೆಪಿ, ಚುನಾವಣೆಯ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ಮತದಾರರೇ ಹೆಚ್ಚಿರುವ ಪ್ರದೇಶದಲ್ಲಿ ಈ ರೀತಿ ಹೇಳಿಕೆ ನೀಡುವ ಮೂಲಕ ಮತ ಗಳಿಗೆಯ ಉದ್ದೇಶವನ್ನು ಹೊಂದಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯ್ದೆ 1951ರ 123(3) ರ ಸ್ಪಷ್ಟ ಉಲ್ಲಂಘನೆಯಾಗಿದ್ದು, ಇವರು ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಕಮಲ್ ಹಾಸನ್ ಉದ್ದೇಶಪೂರ್ವಕವಾಗಿ ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವಿನ ದ್ವೇಷವನ್ನು ಉತ್ತೇಜಿಸುತ್ತಿದ್ದು, ಸಾಮರಸ್ಯ ಹಾಗೂ ಸಹೋದರತ್ವವನ್ನು ನಿರ್ವಹಿಸಲು ಪೂರ್ವಾಗ್ರಹ ಪೀಡಿತವಾಗಿ ಹೇಳಿಕೆ ನೀಡಿದ್ದಾರೆ. ಇದು ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಅಪರಾಧವಾಗಿದ್ದು, ಇದರ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ದೂರು ನೀಡಿದೆ.
Discussion about this post