ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚೆನ್ನೈ: ಕೋವಿಡ್19 ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರ ಮಾಡಲಾಗಿದೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದ್ದು, ಎಸ್’ಪಿಬಿ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬರುತ್ತಿಲ್ಲ ಎಂದು ವರದಿಯಾಗಿದೆ.
ಕೊರೋನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೊನ್ನೆ ಅವರ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು. ಆದರೆ, ನಿನ್ನೆ ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಐಸಿಯುಗೆ ಶಿಫ್ಟ್ ಮಾಡಿ, ವೆಂಟಿಲೇಟರ್’ನಲ್ಲಿರಿಸಲಾಗಿದೆ ಎಂದು ವರದಿಯಾಗಿದೆ.
Get In Touch With Us info@kalpa.news Whatsapp: 9481252093
Discussion about this post