ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ ಮೇ 23ರಂದು ಹೊರಬೀಳಲಿದ್ದು, ಈ ವೇಳೆ ಭಾರೀ ಪ್ರಮಾಣದಲ್ಲಿ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಸುಮಾರು 200 ಕೇಂದ್ರೀಯ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.
ಈ ಕುರಿತಂತೆ ಮಹತ್ವದ ಆದೇಶ ಹೊರಡಿಸಿರುವ ಕೇಂದ್ರ ಚುನಾವಣಾ ಆಯೋಗದ ವಿಶೇಷ ವೀಕ್ಷಕ ವಿವೇಕ್ ದುಬೆ, ರಾಜ್ಯದ ಪ್ರಮುಖ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಕೇಂದ್ರೀಯ ಭದ್ರತಾ ಪಡೆಯ 200 ಪಡೆಗಳನ್ನು ನಿಯೋಜಿಸಿದ್ದೇವೆ. ಇದರ ಹೊರತಾಗಿ ಪಶ್ಚಿಮ ಬಂಗಾಳದಾದ್ಯಂತ 510 ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ನಡೆದ ಹಲವು ಹಂತಗಳ ಮತದಾನದ ವೇಳೆ ಭಾರೀ ಪ್ರಮಾಣದಲ್ಲಿ ಅಹಿತಕರ ಘಟನೆಗಳು ನಡೆದ ಹಿನ್ನೆಲೆಯಲ್ಲಿ ಫಲಿತಾಂಶದ ವೇಳೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.







Discussion about this post