ನವದೆಹಲಿ: ಬಾಲಾಕೋಟ್ ಮೇಲೆ ಭಾರತೀಯ ವಾಯುಸೇನೆ ದಾಳಿ ನಡೆಸಿ ನೂರಾರು ಉಗ್ರರನ್ನು ಬಲಿ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲುವುದಾಗಿ ಹೇಳಿರುವ ಜೈಷ್ ಎ ಮೊಹಮದ್ ಉಗ್ರ ಸಂಘಟನೆ, ಭಾರತದ ಮೂವರು ಪ್ರಮುಖ ನಾಯಕರನ್ನು ಗುರಿಯಾಗಿಸಿಕೊಂಡಿರುವುದಾಗಿ ಹೇಳಿದೆ.
ಜೈಷ್ ಉಗ್ರರು ಎರಡು ಪ್ರತ್ಯೇಕ ಬೆದರಿಕೆ ಪತ್ರಗಳನ್ನು ಬಿಡುಗಡೆ ಮಾಡಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ, ಹಿಂದುತ್ವದ ಫೈರ್ ಬ್ರಾಂಡ್ ಯೋಗಿ ಆದಿತ್ಯನಾಥ್, ಆರ್’ಎಸ್’ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಟಾರ್ಗೆಟ್ ಮಾಡಿರುವುದಾಗಿ ಹೇಳಿದೆ.
ಉತ್ತರ ಪ್ರದೇಶ ಪೊಲೀಸರು ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದ್ದು, ಉತ್ತರ ಕನ್ನಡದ ಶಾಮ್ಲಿ ಮತ್ತು ಉತ್ತಾರಖಂಡದ ರೂರ್‌ಕಿ ಯ ರೈಲು ನಿಲ್ದಾಣಗಳಲ್ಲಿ ಎರಡು ಪತ್ರಗಳು ಪತ್ತೆಯಾಗಿವೆ ಎನ್ನಲಾಗಿದೆ.
ಪಶ್ಚಿಮ ಉತ್ತರ ಪ್ರದೇಶ ಮತ್ತು ಪ್ರಮುಖ ದೇವಾಲಯಗಳು, ರೈಲು ನಿಲ್ದಾಣದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆದರಿಕೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
Discussion about this post