ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಇಡಿಯ ದೇಶ ಮಾತ್ರವಲ್ಲ ವಿಶ್ವವೇ ಭಾರತದತ್ತ ಕಾತರದಿಂದ ತಿರುಗಿನೋಡುತ್ತಿದೆ.
ಆದರೆ, ಈ ಹೈವೋಲ್ಟೇಜ್ ಫಲಿತಾಂಶದ ದಿನವಾದ ನಾಳೆ ದೇಶದ ಹಲವು ಭಾಗಗಳಲ್ಲಿ ಹಿಂಸಾಚಾರ ನಡೆಯುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗರಿಷ್ಠ ಭದ್ರತೆ ಕಲ್ಪಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ.
ಈ ಕುರಿತಂತೆ ಎಲ್ಲ ರಾಜ್ಯಗಳ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಮುಖ್ಯಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿರುವ ಗೃಹ ಸಚಿವಾಲಯ, ಹಲವು ಭಾಗಗಳಲ್ಲಿ ಮತ ಎಣಿಕೆ ಕಾರ್ಯ ಸ್ಥಗಿತಗೊಳಿಸುವ ಹಾಗೂ ಹಿಂಸಾಚಾರ ಭುಗಿಲೇಳುವ ಸಾಧ್ಯತೆ ಇದೆ. ಕೇಂದ್ರಾಡಳಿ ಪ್ರದೇಶ ಹಾಗೂ ಆಯಾ ರಾಜ್ಯಗಳು ಸೂಕ್ತ ಭದ್ರತೆಯ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದೆ.
ಅತ್ಯಂತ ಪ್ರಮುಖವಾಗಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ ಹಾಗೂ ತ್ರಿಪುರಾಗಳಲ್ಲಿ ಭಾರೀ ಪ್ರಮಾಣದಲ್ಲಿ ಹಿಂಸಾಚಾರ ನಡೆಯುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
Discussion about this post