ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿಯೇ, ವ್ಯಾಪಕವಾಗಿ ಸೋಂಕು ಹರಡಲು ಕಾರಣವಾಗಿದೆ ಎಂಬ ಅನುಮಾನ ವ್ಯಕ್ತವಾಗಿರುವ ದೆಹಲಿಯ ಬಂಗ್ಲೆವಾಲಿ ಮಸೀದಿಯನ್ನು ಖಾಲಿ ಮಾಡಿಸಲು ದೇಶದ ಜೇಮ್ಸ್ ಬಾಂಡ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಸ್ವತಃ ಅಖಾಡಕ್ಕಿಳಿದ್ದಾರೆ.
ಗೃಹ ಇಲಾಖೆಯ ಮಾಹಿತಿಯನ್ವಯ, ಮಾರ್ಚ್ 28-29ರಂದು ಮಧ್ಯರಾತ್ರಿ 2 ಗಂಟೆಗೆ ಧೋವಲ್ ಹಾಗೂ ಗೃಹ ಸಚಿವ ಅಮಿತ್ ಶಾ ಈ ಪ್ರದೇಶಕ್ಕೆ ಭೇಟಿ ನೀಡಿದ್ದು, ನಿಜಾಮುದ್ದೀನ್ ಮಾರ್ಕಾಜ್ ಮುಖ್ಯಸ್ಥ ಮೌಲಾನಾ ಸಾದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇಲ್ಲಿರುವ ಎಲ್ಲರಿಗೂ ಕೋವಿಡ್19 ಸೋಂಕು ಪರೀಕ್ಷೆ ಮಾಡಬೇಕಿದ್ದು, ಇದಕ್ಕಾಗಿ ಕ್ವಾರಂಟೈನ್ ಅನಿವಾರ್ಯ. ಇಲ್ಲಿನ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ತೆಲಂಗಾಣದ ಕರೀಂನಗರ 9 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಪರೀಕ್ಷೆ ನಡೆಸುವಂತೆ ಎಚ್ಚರಿಕೆ ಸಂದೇಶ ರವಾನಿಸಿದೆ.
ಇನ್ನು, ಮಸೀದಿ ಸೇರಿದಂತೆ ಇಡಿಯ ಪ್ರದೇಶದಲ್ಲಿ 400 ಸಿಬ್ಬಂದಿಗಳು ಸ್ಯಾನಿಟೈಸೇಷನ್ ಕಾರ್ಯ ನಡೆಸುತ್ತಿದ್ದಾರೆ. ಇಡಿಯ ಪ್ರದೇಶವನ್ನು ವಶಕ್ಕೆ ಪಡೆದಿದ್ದು, ಸಂಪೂರ್ಣವಾಗಿ ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ.
Get in Touch With Us info@kalpa.news Whatsapp: 9481252093
Discussion about this post