ಶಿವಮೊಗ್ಗ: ಸಂಸ್ಕೃತ ಗ್ರಾಮ ಮತ್ತೂರನ್ನು ಜಾಗತಿಕ ಮಟ್ಟದಲ್ಲಿ ಖ್ಯಾತಿಗೆ ತರುವಲ್ಲಿ ಅಪಾರ ಕೊಡುಗೆ ನೀಡಿದ್ದ ಮತ್ತೂರು ಮಾರ್ಕಾಂಡೇಯ ಅವಧಾನಿಗಳು ಇಂದು ನಸುಕಿನಲ್ಲಿ ಸ್ವರ್ಗಸ್ಥರಾಗಿದ್ದಾರೆ.
ದೇಶ ಮಾತ್ರವಲ್ಲ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೂರು ಖ್ಯಾತಿಗಳಿಸುವಲ್ಲಿ ಅವಧಾನಿಗಳ ಕೊಡುಗೆ ಒಂದು ದೊಡ್ಡ ಇತಿಹಾಸ. ಅಲ್ಲದೇ, ಗಮಕ ಕಲೆಯನ್ನು ಮುಖ್ಯವಾಹಿನಿಗೆ ತರುವಲ್ಲಿ ಇವರ ಶ್ರಮವೂ ಸಹ ದೊಡ್ಡದಿದೆ. ಇವರಿಗೆ ಕುಮಾರವ್ಯಾಸ ಪ್ರಶಸ್ತಿಯೂ ಸಹ ಸಂದಿದೆ.
ಅವಧಾನಿಗಳ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಶಾಸಕ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ, ಶಾಸಕರುಗಳಾದ ಅರಗ ಜ್ಞಾನೇಂದ್ರ, ಕುಮಾರ್ ಬಂಗಾರಪ್ಪ, ಹರತಾಳು ಹಾಲಪ್ಪ, ಕೆ.ಬಿ. ಅಶೋಕ್ ನಾಯ್ಕ್, ಮಾಜಿ ಶಾಸಕರುಗಳಾದ ಎಂ.ಬಿ. ಭಾನುಪ್ರಕಾಶ್, ಆರ್.ಕೆ. ಸಿದ್ದರಾಮಣ್ಣ, ಕೆ.ಬಿ. ಪ್ರಸನ್ನ ಕುಮಾರ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
Discussion about this post