ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ಸಂವಿಧಾನದ 370 ಹಾಗೂ 35ಎ ವಿಧಿಯಂತೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ, ಈ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಸಂಸತ್’ನಲ್ಲಿ ಹೇಳಿಕೆ ನೀಡಿದ್ದು, ಜಮ್ಮು ಕಾಶ್ಮೀರವನ್ನು ವಿಭಜನೆ ಮಾಡುವ ಐತಿಹಾಸಿಕ ನಿರ್ಣಯವನ್ನು ಘೋಷಿಸಿದ್ದಾರೆ.
ಜಮ್ಮು ಕಾಶ್ಮೀರದಿಂದ ಲಡಾಕ್ ಅನ್ನು ಪ್ರತ್ಯೇಕಗೊಳಿಸಿ, ಎರಡೂ ಪ್ರದೇಶಗಳು ಇನ್ನು ಮುಂದಿನ ದಿನಗಳಲ್ಲಿ ಕೇಂದ್ರಾಡಳಿತ ಪ್ರದೇಶವಾಗಿರಲಿವೆ. ಜಮ್ಮು ಕಾಶ್ಮೀರ ವಿಧಾನಸಭೆ ಹೊಂದಿರುವ ಕೇಂದ್ರಾಡಳಿತ ಪ್ರದೇಶವಾಗಲಿದ್ದರೆ, ಲಡಾಕ್ ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಿರಲಿದೆ.
Discussion about this post