ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಮ್ಮು ಕಾಶ್ಮೀರದಲ್ಲಿ #JammuKashmir ಉಗ್ರರ ವಿರುದ್ಧ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಶತ್ರುಗಳ ಗುಂಡಿಗೆ ಎದೆಕೊಟ್ಟು ವೀರಸ್ವರ್ಗ ಸೇರಿದ ರಾಜ್ಯ ಕ್ಯಾ.ಪ್ರಾಂಜಲ್ #CaptPranjal ಅವರಿಗೆ ಸಕಲ ಸೇನೆ ಹಾಗೂ ಪೊಲೀಸ್ ಪಡೆಗಳಿಂದ ಅಂತಿಮ ವಿದಾಯ ಹೇಳಲಾಗಿದ್ದು, ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.
ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕ್ಯಾ.ಪ್ರಾಂಜಲ್ ಸೇರಿ ಐವರು ಯೋಧರು ಹುತಾತ್ಮರಾಗಿದ್ದಾರೆ. #Martyrdom ಹೀಗೆ ವೀರಸ್ವರ್ಗ ಸೇರಿದ ಪ್ರಾಂಜಲ್ ಅವರ ಪಾರ್ಥಿವ ಶರೀರವನ್ನು ನಿನ್ನೆ ಸೇನಾ ವಿಮಾನದಲ್ಲಿ ಬೆಂಗಳೂರಿನ #Bengaluru ಎಚ್’ಎಎಲ್ ವಿಮಾನ ನಿಲ್ದಾಣಕ್ಕೆ ತರಲಾಯಿತು.
ಎಚ್’ಎಎಲ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಸೇರಿ ಹಲವು ಗಣ್ಯರು ನಮನ ಸಲ್ಲಿಸಿದ್ದರು. ಆನಂತರ ಜಿಗಣಿಯಲ್ಲಿರುವ ಪ್ರಾಂಜಲ್ ಅವರ ನಿವಾಸಕ್ಕೆ ಪಾರ್ಥಿವ ಶರೀರ ತರಲಾಗಿತ್ತು.
ಇಂದು ಬೆಳಗ್ಗೆ 7 ಗಂಟೆಯಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಇಂದು ಮುಂಜಾನೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಹಲವು ಗಣ್ಯರು, ಸೇನಾಧಿಕಾರಿಗಳು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಅಂತಿಮ ನಮನ ಸಲ್ಲಿಸಿದರು. ನಿಯಮದಂತೆ ಸೇನಾ ಪಡೆ ಹಾಗೂ ಪೊಲೀಸ್ ಪಡೆಗಳಿಂದ ಅಂತಿಮ ನಮನ ಸಲ್ಲಿಸಲಾಯಿತು.
ಹರಿದುಬಂದ ಜನ ಸಾಗರ
ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ಕ್ಯಾ.ಪ್ರಾಂಜಲ್ ಅವರ ಅಂತಿಮ ದರ್ಶನಕ್ಕೆ ರಾತ್ರಿಯಿಂದಲೇ ಸಾರ್ವಜನಿಕರು ಆಗಮಿಸುತ್ತಿದ್ದರು.
ಇಂದು ಮುಂಜಾನೆಯಿಂದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ವಿವಿಧ ಕಡೆಗಳಿಂದ ಸಾವಿರಾರು ಜನರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ವೀರ ಯೋಧನ ಅಂತಿಮ ದರ್ಶನ ಪಡೆದರು. ಬಹಳಷ್ಟು ಮಂದಿ ವೀರ ಯೋಧನ ಪಾರ್ಥಿವ ಶರೀರ ಕಂಡು ಕಣ್ಣೀರು ಸುರಿಸಿದರು.
ಅಂತಿಮ ವಿಧಿವಿಧಾನ
ಸೇನೆ ಹಾಗೂ ಪೊಲೀಸ್ ಪಡೆಗಳಿಂದ ಅಂತಿಮ ಗೌರವ ಸಲ್ಲಿಸಿದ ನಂತರ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ಧಾರ್ಮಿಕ ವಿಧಿವಿಧಾನಗಳನ್ನು ನಡೆಸುತ್ತಿದ್ದಾರೆ.
ಅಂತಿಮ ವಿಧಿವಿಧಾನದ ನಂತರ ಜಿಗಣಿಯಿಂದ ಕೂಡ್ಲು ಗೇಟ್’ವರೆಗೂ ಸುಮಾರು 30 ಕಿಲೋ ಮೀಟರ್’ಗಳಷ್ಟು ದೂರ ಅಂತಿಮ ಮೆರವಣಿಗೆ ನಡೆಯಲಿದ್ದು, ಆನಂತರ ಅಂತ್ಯಸಂಸ್ಕಾರ ನಡೆಸಲಾಗುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post