ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ, ಸಂಘ ಪರಿವಾರ ಸೇರಿದಂತೆ ಪ್ರಕರಣದಲ್ಲಿದ್ದ ಎಲ್ಲ ಆರೋಪಿಗಳು ದೋಷಮುಕ್ತರಾಗಿದ್ದು, ಇವರುಗಳ ಮೇಲಿನ ಆರೋಪವನ್ನು ಸಾಬೀತು ಮಾಡುವಲ್ಲಿ ಸಿಬಿಐ ವಿಫಲವಾಗಿದೆ.
ಈ ಕುರಿತಂತೆ ಮಹತ್ವದ ತೀರ್ಪು ಪ್ರಕಟಿಸಿರುವ ನ್ಯಾಯಾಲಯ, ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾಭಾರತಿ, ಕಲ್ಯಾಣ್ ಸಿಂಗ್ ಸೇರಿದಂತೆ ಬಿಜೆಪಿ, ಸಂಘ ಪರಿವಾರ, ವಿಎಚ್’ಪಿ ಸೇರಿದಂತೆ ಯಾರೂ ಮಸೀದಿ ಧ್ವಂಸಕ್ಕೆ ಯಾವುದೇ ಕ್ರಿಮಿನಲ್ ಸಂಚು ರೂಪಿಸಿಲ್ಲ ಎಂದು ಸ್ಪಷ್ಟಪಡಿಸಿದೆ.
ಬಿಜೆಪಿ, ಸಂಘ ಪರಿವಾರ, ವಿಎಚ್’ಪಿ ಸೇರಿದಂತೆ ಎಲ್ಲ ಆರೋಪಿಗಳ ವಿರುದ್ಧದ ಆರೋಪವನ್ನು ಸಾಬೀತು ಮಾಡುವಲ್ಲಿ ವಿಫಲವಾಗಿರುವ ಸಿಬಿಐ, ಪ್ರಕರಣದಲ್ಲಿ ತಿರುಚಿದ ವೀಡಿಯೋಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ. ಆದರೆ, ತೀರ್ಪಿನ ಪ್ರತಿ ಇನ್ನೂ ಬಹಿರಂಗವಾಗಬೇಕಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕೇವಲ ಆಕಸ್ಮಿಕವೇ ಹೊರತು, ಪೂರ್ವ ನಿಯೋಜಿತ ಕೃತ್ಯವಲ್ಲ. ಎಲ್ಲ ಆರೋಪಿಗಳ ವಿರುದ್ಧ ಆರೋಪವನ್ನು ಸಾಬೀತು ಮಾಡುವಲ್ಲಿ ಸಿಬಿಐ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news






Discussion about this post