ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2 ಘೋಷಣೆ ಮಾಡಿರುವ ಬೆನ್ನಲ್ಲೇ ಶಿವಮೊಗ್ಗ ಸೇರಿದಂತೆ ಇನ್ನುಳಿದ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಪಾಸಿಟಿವಿಟಿ ದರ ಶೇ.5ಕ್ಕಿಂತಲೂ ಹೆಚ್ಚಿರುವ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ದಾವಣಗೆರೆ, ಕೊಡಗು, ಬಳ್ಳಾರಿ, ಚಿತ್ರದುರ್ಗ, ಧಾರವಾಡ, ವಿಜಯಪುರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಜೂನ್ 11ರಂದು ಜಾರಿಗೊಳಿಸಲಾಗಿರುವ ನಿರ್ಬಂಧಗಳೇ ಮುಂದುವರೆಯಲಿವೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















