ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡದ ಖ್ಯಾತ ನಿರೂಪಕಿ, ಹಿರಿಯ ನಟಿ ಅಪರ್ಣಾ(51) ಇಂದು ವಿಧಿವಶರಾಗಿದ್ದಾರೆ.
ಕ್ಯಾನ್ಸರ್’ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬನಶಂಕರಿಯ ತಮ್ಮ ನಿವಾಸದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ನಿರೂಪಕಿಯಾಗಿ ಕಾರ್ಯ ನಿರ್ವಹಿಸಿದ್ದ ಅಪರ್ಣಾ, ಅಚ್ಚ ಕನ್ನಡದಲ್ಲಿ ನಿರೂಪಣೆ ಮಾಡುವುದರಲ್ಲಿ ದಾಖಲೆ ಬರೆದಿದ್ದಾರೆ.
ಪ್ರಮುಖವಾಗಿ ಭಾರತ ಸರ್ಕಾರದ ವಿವಿಧ ಕಾರ್ಯಕ್ರಮದ ನಿರೂಪಣೆ, ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998 ರಲ್ಲಿ ನೆಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿರುವ ಅಪರ್ಣಾ ಅವರ ಮಾತಿನ ಶೈಲಿಗೆ ಮನಸೋಲದವರೇ ಇಲ್ಲ.
ಇನ್ನು, 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದ ಮೂಲಕ ಕನ್ನಡ ಚಲನಚಿತ್ರ ರಂಗಕ್ಕೂ ಕಾಲಿಟ್ಟಿದ್ದ ಅವರು, ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್, ಅಂಬರೀಶ್, ಅನಂತನಾಗ್ ಸೇರಿದಂತೆ ಬಹುತೇಕ ಹಿರಿಯ ನಟರೊಂದಿಗೆ ನಟಿಸಿದ್ದಾರೆ.
ಕನ್ನಡ ಬಿಗ್ ಬಾಸ್ ಮೊದಲ ಸೀಸನ್’ನಲ್ಲಿ ಪಾಲ್ಗೊಂಡಿದ್ದ ಅಪರ್ಣಾ, ಕಿರುತೆರೆಯ ಖ್ಯಾತ ಹಾಸ್ಯ ಕಾರ್ಯಕ್ರಮ ಮಜಾ ಟಾಕೀಸ್ ವರಲಕ್ಷ್ಮಿ ಪಾತ್ರದ ಮೂಲಕ ಕಮಾಲ್ ಮಾಡಿದ್ದರು.
ಬೆಂಗಳೂರಿನ ನಮ್ಮ ಮೆಟ್ರೋ ರೈಲು ಹಾಗೂ ನಿಲ್ದಾಣದಲ್ಲಿ ಘೋಷಣೆಗಳಿಗೆ ಧ್ವನಿಯಾಗಿರುವ ಅಪರ್ಣಾ ಇನ್ನು ಕನ್ನಡಿಗರಿಗೆ ನೆನಪು ಮಾತ್ರ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post