ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದೆ. ಈ ವೇಳೆ 50 ಲಕ್ಷ ರೂ. ದಾಖಲೆಯಿಲ್ಲದ ಹಣ ದೊರೆತಿದ್ದು, ಅವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಅವರಿಗೆ ಸೇರಿದ ಸುಮಾರು 15ಕ್ಕೂ ಅಧಿಕ ಸ್ಥಳಗಳ ಮೇಲೆ ಸಿಬಿಐ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿದ್ದರು. ಈ ವೇಳೆ ಡಿಕೆಶಿ ಅವರ ದೆಹಲಿ ನಿವಾಸ ಹಾಗೂ ಬೆಂಗಳೂರು ನಿವಾಸದಲ್ಲಿ ತಲಾ 50 ಲಕ್ಷ ರೂ. ಹಾಗೂ ಮುಂಬೈ ನಿವಾಸದಲ್ಲಿ 3 ಕೋಟಿ ರೂ. ದಾಖಲೆಯಿಲ್ಲದ ಹಣ ದೊರೆತಿದೆ ಎನ್ನಲಾಗಿದ್ದು, ಎಫ್’ಐಆರ್ ದಾಖಲಿಸಲಾಗಿದೆ.
ಇನ್ನು, ಎಫ್’ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಶಿವಕುಮಾರ್ ಅವರನ್ನು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಡಿಕೆಶಿ ತಾಯಿ ಗೌರಮ್ಮ ವಾಗ್ದಾಳಿ
ಸಿಬಿಐ ದಾಳಿ ಹಿನ್ನೆಲೆಯಲ್ಲಿ ಶಿವಕುಮಾರ್ ಅವರ ತಾಯಿ ಗೌರಮ್ಮ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನನ್ನ ಮಗನನ್ನು ಸರ್ಕಾರಕ್ಕೆ ಹಾಗೂ ಅಧಿಕಾರಿಗಳು ಪ್ರೀತಿ. ಹೀಗಾಗಿ, ಪದೇ ಪದೇ ಮನೆಗೆ ಬರುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಅವರಿಗೆ ಬೇರೆ ಏನೂ ಕೆಲಸವಿಲ್ಲ. ಬನ್ನಿ, ಇಲ್ಲಿರುವ ಇಟ್ಟಿಗೆ-ಪಟ್ಟಿಗೆ ಎಲ್ಲವನ್ನು ತುಂಬಿಕೊಂಡು ಹೋಗಿ. ನನ್ನನ್ನೂ ಸೇರಿಕೊಂಡು ಎಲ್ಲರನ್ನೂ ಕರೆದುಕೊಂಡು ಹೋಗಿ ಎಂದು ಸರ್ಕಾರ ಹಾಗೂ ಸಿಬಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post