ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲಾ ಭಾರತೀಯ ವಾಯುಪಡೆ #IndianAirForce ಮಾಜಿ ಮುಖ್ಯಸ್ಥ ಆರ್.ಕೆ.ಎಸ್. ಭದೌರಿಯಾ ಅವರು ಇಂದು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಇಂದು ಅಧಿಕೃತವಾಗಿ ಬಿಜೆಪಿ #BJP ಸೇರ್ಪಡೆಗೊಂಡ ನಂತರ ಮಾತನಾಡಿದ ಅವರು, ಮತ್ತೊಮ್ಮೆ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ನನಗೆ ಈ ಅವಕಾಶವನ್ನು ನೀಡಿದ ಪಕ್ಷದ ನಾಯಕತ್ವಕ್ಕೆ ನಾನು ಧನ್ಯವಾದ ಹೇಳುತ್ತೇನೆ ಎಂದರು.

ಸರ್ಕಾರದ ಸ್ವಾವಲಂಭಿ ನಡೆಯ ಫಲಿತಾಂಶಗಳನ್ನು ನಾವೀಗಾಗಲೇ ಕಾಣುತ್ತಿದ್ದೇವೆ. ಭದ್ರತೆಯ ದೃಷ್ಟಿಯಿಂದ, ಸರ್ಕಾರವು ತೆಗೆದುಕೊಳ್ಳುತ್ತಿರುವ ಕ್ರಮಗಳು ಬಹಳ ಮುಖ್ಯ ಮತ್ತು ಭಾರತವನ್ನು ಜಾಗತಿಕವಾಗಿ ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂದಿದ್ದಾರೆ.

ಭದೌರಿಯಾ ಅವರು ಉತ್ತರ ಪ್ರದೇಶದ ಗಾಜಿಯಾಬಾದ್ ಅಥವಾ ಮೀರತ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post