ಕಲ್ಪ ಮೀಡಿಯಾ ಹೌಸ್ | ಲಕ್ನೋ |
ಮಾಜಿ ಸಂಸದ, ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಇಬ್ಬರೂ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಶೂಟೌಟ್’ಗೆ ಬಲಿಯಾಗಿದ್ದಾರೆ.
#WATCH | Uttar Pradesh: Moment when Mafia-turned-politician Atiq Ahmed and his brother Ashraf Ahmed were shot dead while interacting with media.
(Warning: Disturbing Visuals) pic.twitter.com/xCmf0kOfcQ
— ANI (@ANI) April 15, 2023
ಇಬ್ಬರನ್ನು ಇಂದು ಸಂಜೆ ಪ್ರಯಾಗ್ ರಾಜ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗಾಗಿ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಲು ಮುಂದಾದ ವೇಳೆ ಅನಾಮಿಕ ವ್ಯಕ್ತಿಗಳು ಪಿಸ್ತೂಲಿನಿಂದ ಗುಂಡು ಹಾರಿಸಿದ್ದು, ಇಬ್ಬರೂ ಮೃತಪಟ್ಟಿದ್ದಾರೆ.
ಎ.13 ರಂದು ಅತಿಕ್ ಅಹ್ಮದ್ ಪುತ್ರ 12ಅಸಾದ್ ಮತ್ತು ಗುಲಾಂನನ್ನು ಉತ್ತರ ಪ್ರದೇಶ ಪೊಲೀಸರು ಎನ್ಕೌಂಟರ್ ಮಾಡಿ ಹತ್ಯೆ ಮಾಡಿದ್ದರು.
#WATCH | UP: Aftermath from the spot where Mafia-turned-politician Atiq Ahmed and his brother Ashraf Ahmed were shot dead while interacting with media. pic.twitter.com/uduGfUEO8g
— ANI (@ANI) April 15, 2023
ಉಮೇಶ್ ಪಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಅಸಾದ್ ಮತ್ತು ಗುಲಾಂ ಅವರ ಬಗ್ಗೆ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು. ನಾಪತ್ತೆಯಾಗಿದ್ದ ಈ ಇಬ್ಬರನ್ನು ಝಾನ್ಸಿಯಲ್ಲಿ ಎನ್ಕೌಂಟರ್ ಮಾಡಿ ಹತ್ಯೆ ಮಾಡಲಾಗಿದೆ.
2005ರ ಬಹುಜನ ಸಮಾಜ ಪಾರ್ಟಿಯ ಶಾಸಕ ರಾಜುಪಾಲ್ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಅವರನ್ನು ಫೆ.24 ರಂದು ಅತಿಕ್ ಅಹಮ್ಮದ್ ಗ್ಯಾಂಗ್ ಸದಸ್ಯರು ಗುಂಡಿಟ್ಟು ಹತ್ಯೆ ಮಾಡಿದ್ದರು. ಹತ್ಯೆಯಾದ ಇಬ್ಬರಿಂದ ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತಾçಸ್ತçಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post