ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನಿರೀಕ್ಷೆಯಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸಂಪುಟದಲ್ಲಿ ಸಚಿವರಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ರಾಜ್ಯದ ಹೆಮ್ಮೆಯ ಎಚ್.ಡಿ. ಕುಮಾರಸ್ವಾಮಿ #HDKumaraswamy ಅವರು ಸ್ಥಾನ ಪಡೆದಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ #RashtrapatiBhavan ಇಂದು ಸಂಜೆ ನಡೆದ ಅದ್ದೂರಿ ಸಮಾರಂಭದಲ್ಲಿ ಕೇಂದ್ರ ಸಂಪುಟ ಸಚಿವರಾಗಿ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ಈ ಮೂಲಕ ರಾಜ್ಯಕ್ಕೆ ಹೊಸ ಅಧ್ಯಾಯ ಆರಂಭವಾಗಿದೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರ ವೀಕ್ಷಿಸಿ
ತಮ್ಮ ಹುಟ್ಟೂರಿನ ಸಹಿತ ಪೂರ್ಣ ಹೆಸರು ಹೇಳಿ ಈಶ್ವರನ ಹೆಸರಿನಲ್ಲಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕರಿಸಲು ಕುಮಾರಸ್ವಾಮಿ ಅವರನ್ನು ವೇದಿಕೆಗೆ ಆಹ್ವಾನಿಸುತ್ತಿದ್ದಂತೆಯೇ ಕುಮಾರಣ್ಣನಿಗೆ ಜಯವಾಗಲಿ, ಜೈ ಕುಮಾರಣ್ಣ ಎಂಬ ಘೋಷಣೆಗಳು ಕನ್ನಡದಲ್ಲೇ ಮೊಳಗಿದ್ದ ವಿಶೇಷವಾಗಿದೆ.
ಇನ್ನು, ಕುಮಾರಸ್ವಾಮಿ ಅವರು ಮೋದಿ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ರಾಜ್ಯ ರಾಜಧಾನಿ ಬೆಂಗಳೂರು, ಜೆಡಿಎಸ್ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗ ಸೇರಿದಂತೆ ರಾಜ್ಯದಾದ್ಯಂತ ಸಂಭ್ರಮ ಮನೆ ಮಾಡಿದೆ. ಎಲ್ಲಡೆ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post