ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಾದ್ಯಂತ ಮೇ 23ರವರೆಗೂ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಇಂದು ಆರೆಂಜ್ ಅಲರ್ಟ್ #OrangeAlert ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ #IMDKarnataka ಮಾಹಿತಿ ಪ್ರಕಟಿಸಿದ್ದು, ಜಿಲ್ಲೆಯಾದ್ಯಂತ ಇಂದು ಆರೆಂಜ್ ಅಲರ್ಟ್ ಘೋಷಿಸಿ, ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ.
ಇನ್ನು ಮೇ 22 ಹಾಗೂ 23ರವರೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಎರಡೂ ದಿನವೂ ಗುಡುಗು, ಸಿಡಿಲು ಸಹಿತ ಮಳೆ #HeavyRain ಸುರಿಯುವ ಸೂಚನೆ ನೀಡಲಾಗಿದೆ.
ಇನ್ನು, ಶಿವಮೊಗ್ಗ ನಗರ ಹಾಗೂ ಭದ್ರಾವತಿ ಸೇರಿದಂತೆ ಹಲವು ತಾಲೂಕುಗಳಲ್ಲಿ ಇಂದು ಭಾರೀ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗುವ ಆತಂಕವೂ ಸಹ ಇದೆ.
Also read: ಲೈಂಗಿಕ ದೌರ್ಜನ್ಯ ಕೇಸ್ | ಶಾಸಕ ಎಚ್.ಡಿ. ರೇವಣ್ಣಗೆ ಜಾಮೀನು ಮಂಜೂರು
ಇದರೊಂದಿಗೆ ಸಾಗರ, ತೀರ್ಥಹಳ್ಳಿ, ಹೊಸನಗರ ಭಾಗದಲ್ಲೂ ಸಹ ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post