ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ಮಲೆನಾಡು ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿ ಅ.18ರವರೆಗೂ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯ ಹವಾಮಾನ ಇಲಾಖೆ ವರದಿ ಬಿಡುಗಡೆ ಮಾಡಿದ್ದು, ಇದರಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.18ರವರೆಗೂ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಕ್ಟೋಬರ್ 14: ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಸೇರಿ ಕೆಲವು ಜಿಲ್ಲೆಗಳಲ್ಲಿ 64.5ರಿಂದ 115.5 ಮಿಮೀವರೆಗೂ ಮಳೆ ನಿರೀಕ್ಷೆ.
ಅಕ್ಟೋಬರ್ 15: ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 64.5ರಿಂದ 115.5 ಮಿಮೀ ಮಳೆ ನಿರೀಕ್ಷೆ.
ಅಕ್ಟೋಬರ್ 16: ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 64.5ರಿಂದ 115.5 ಮಿಮೀ ಮಳೆ ನಿರೀಕ್ಷೆ.
ಅಕ್ಟೋಬರ್ 17: ಮಳೆಯ ಮುನ್ಸೂಚನೆಯಿಲ್ಲ.
ಅಕ್ಟೋಬರ್ 18: ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 64.5ರಿಂದ 115.5 ಮಿಮೀ ಮಳೆ ನಿರೀಕ್ಷೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post