ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ.ಕೆ. ಸುರೇಶ್ ಅವರ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿದೆ.
ಇಂದು ಮುಂಜಾನೆ ಇಬ್ಬರ ನಿವಾಸಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಸಿಬಿಐ ಎಸ್’ಪಿ ಥಾಮ್ಸನ್ ಜೋಶ್ ಅವರ ನೇತೃತ್ವದ ಒಟ್ಟು 60 ಸಿಬಿಐ ಅಧಿಕಾರಿಗಳು 15ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಡಿಕೆಶಿ ಹಾಗೂ ಸುರೇಶ್ ಅವರುಗಳಿಗೆ ಸೇರಿದ ನಿವಾಸ, ಕಚೇರಿ ಹಾಗೂ ಸಂಬಂಧಿಕರುಗಳ ನಿವಾಸದ ಮೇಲೂ ಸಹ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

















