ಕಲ್ಪ ಮೀಡಿಯಾ ಹೌಸ್ | ನವದೆಹಲಿ/ಬೆಂಗಳೂರು |
ಕರ್ನಾಟಕ ವಿಧಾನಸಭೆಗೆ ಚುನಾವಣಾ ದಿನಾಂಕವನ್ನು ನಿಗದಿಪಡಿಸಿರುವ ಮಾಡಿರುವ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಘೋಷಣೆಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.
ಈ ಕುರಿತಂತೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿಂದು ಮಾಹಿತಿ ನೀಡಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಕರ್ನಾಟಕದಲ್ಲಿ 224 ಕ್ಷೇತ್ರಗಳಿಗೆ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆದು ಘೋಷಣೆಯಾಗಲಿದೆ ಎಂದರು.
ಹೀಗಿದೆ ಚುನಾವಣಾ ಪ್ರಕ್ರಿಯೆಗಳ ವೇಳಾಪಟ್ಟಿ:
- ಮಾರ್ಚ್ 29ರಂದು ಚುನಾವಣಾ ದಿನಾಂಕ ಘೋಷಣೆ
- ಮಾರ್ಚ್ 29ರ ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ
- ಎಪ್ರಿಲ್ 13ರಂದು ಅಧಿಸೂಚನೆ ಜಾರಿ
- ಎಪ್ರಿಲ್ 20ರಂದು ನಾಮ ಪತ್ರ ಸಲ್ಲಿಕೆ ಅರಂಭ
- ಎಪ್ರಿಲ್ 21ರಂದು ನಾಮಪತ್ರ ಸಲ್ಲಿಕೆಗೆ ಅವಕಾಶ
- ಎಪ್ರಿಲ್ 24 ನಾಮಪತ್ರ ಹಿಂಪಡೆಯಲು ಅವಕಾಶ
- ಮೇ 10ರಂದು ಒಂದೇ ಹಂತದಲ್ಲಿ ಮತದಾನ
- ಮೇ 13 ರಂದು ಮತಎಣಿಕೆ ಹಾಗೂ ಫಲಿತಾಂಶ
- 15ನೇ ವಿಧಾನಸಭೆಯ ಅವಧಿ ಮೇ 24ಕ್ಕೆ ಅಂತ್ಯ
ಇಂದಿನಿಂದಲೇ ನೀತಿ ಸಂಹಿತೆ ಜಾರಿ
ಚುನಾವಣಾ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ರಾಜ್ಯದಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಅಧಿಕಾರಿಗಳಿಗೆ ಆಯೋಗ ಸೂಚನೆ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















