ಕಲ್ಪ ಮೀಡಿಯಾ ಹೌಸ್ | ತುಮಕೂರು |
ಶಿವಮೊಗ್ಗ #Shivamogga ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ #MadhuBangarappa ಅವರು ತೆರಳುತ್ತಿದ್ದ ಕಾರು ಅಪಘಾತಕ್ಕಿಡಾಗಿದ್ದು, ಸ್ವಲ್ಪದಲ್ಲಿ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ಕ್ಯಾತ್ಸಂದ್ರ ನಂದಿಹಳ್ಳಿ ಬಳಿಯಲ್ಲಿ ತಡರಾತ್ರಿ ಸಚಿವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. #CarAccident

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಚಿವರು ಕಾರು ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ.
ಅಪಘಾತದ ರಭಸಕ್ಕೆ ಸಚಿವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಆನಂತರ ಬದಲಿ ಕಾರಿನಲ್ಲಿ ಸಚಿವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post